ADVERTISEMENT

ಮೊಣಕೈ ಗಾಯ: ಆಟದಿಂದ ಹೊರಗುಳಿಯಲಿರುವ ನ್ಯೂಜಿಲೆಂಡ್‌ ತಂಡದ ನಾಯಕ ವಿಲಿಯಮ್ಸನ್‌

ಪಿಟಿಐ
Published 7 ಡಿಸೆಂಬರ್ 2021, 14:48 IST
Last Updated 7 ಡಿಸೆಂಬರ್ 2021, 14:48 IST
ಕೇನ್ ವಿಲಿಯಮ್ಸನ್‌
ಕೇನ್ ವಿಲಿಯಮ್ಸನ್‌    
ವೆಲ್ಲಿಂಗ್ಟನ್‌: ನ್ಯೂಜಿಲೆಂಡ್‌ ಕ್ರಿಕೆಟ್‌ ತಂಡದ ನಾಯಕ ಕೇನ್ ವಿಲಿಯಮ್ಸನ್‌ ಅವರು ಮೊಣಕೈ ನೋವಿನಿಂದ ಬಳಲುತ್ತಿದ್ದು, ಮುಂದಿನ ಎರಡು ತಿಂಗಳು ಆಟದಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ಕೋಚ್ ಗ್ಯಾರಿ ಸ್ಟೆಡ್‌ ತಿಳಿಸಿದ್ದಾರೆ.

2022ರ ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಟೆಸ್ಟ್‌ ಸರಣಿ ವೇಳೆಗೆ ವಿಲಿಯಮ್ಸನ್‌ ತಂಡಕ್ಕೆ ಮರಳಿಲಿದ್ದಾರೆ ಎಂದು ಹೇಳಿದ್ದಾರೆ.

ಭಾರತದ ವಿರುದ್ಧ ಇತ್ತೀಚೆಗೆ ಮುಕ್ತಾಯಗೊಂಡ ಎರಡನೇ ಟೆಸ್ಟ್‌ ಪಂದ್ಯಕ್ಕೂ ಮುನ್ನ ವಿಲಿಯಮ್ಸನ್‌ ಗಾಯಗೊಂಡಿದ್ದರು. ವೈದ್ಯರ ಸಲಹೆಯಂತೆ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದು, ಕನಿಷ್ಠ ಎಂಟರಿಂದ ಒಂಬತ್ತು ವಾರ ವಿಶ್ರಾಂತಿ ಪಡೆಯುವುದು ಖಚಿತ ಎಂದು ಮೂಲಗಳು ತಿಳಿಸಿವೆ.

ನ್ಯೂಜಿಲೆಂಡ್‌ ಹೊಸ ವರ್ಷದ (2022) ಆರಂಭದಲ್ಲಿ ಬಾಂಗ್ಲಾದೇಶದ ವಿರುದ್ಧ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಬಳಿಕ ಫೆಬ್ರವರಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ 3 ಏಕದಿನ ಮತ್ತು 1 ಟಿ–20 ಪಂದ್ಯವನ್ನು ಆಡಲಿದೆ.

ವಿಲಿಯಮ್ಸನ್‌ ಅನುಪಸ್ಥಿತಿಯಲ್ಲಿ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬುದು ಇನ್ನೂ ಖಚಿತವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT