ADVERTISEMENT

Ranji Trophy Final: ಕರ್ನಾಟಕ ತಂಡದಲ್ಲಿ ಬದಲಾವಣೆ ಇಲ್ಲ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2026, 22:30 IST
Last Updated 20 ಫೆಬ್ರುವರಿ 2026, 22:30 IST
<div class="paragraphs"><p>ಮಯಂಕ್ ಅಗರವಾಲ್</p></div>

ಮಯಂಕ್ ಅಗರವಾಲ್

   

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರ ತಂಡದ ವಿರುದ್ಧ ಇದೇ 24 ರಿಂದ 28ರವರೆಗೆ ಹುಬ್ಬಳ್ಳಿಯಲ್ಲಿ ನಡೆಯಲಿರುವ ರಣಜಿ ಟ್ರೋಫಿ ಪಂದ್ಯಕ್ಕೆ ಕರ್ನಾಟಕ ತಂಡವನ್ನು ಶುಕ್ರವಾರ ಪ್ರಕಟಿಸಲಾಗಿದೆ. ಉತ್ತರಾಖಂಡ ವಿರುದ್ಧ ಸೆಮಿಫೈನಲ್‌ನಲ್ಲಿ ಆಡಿದ ತಂಡವನ್ನೇ ಅಂತಿಮ ಪಂದ್ಯಕ್ಕೂ ಉಳಿಸಿಕೊಳ್ಳಲಾಗಿದೆ.

ಎಂಟು ಬಾರಿಯ ಚಾಂಪಿಯನ್ ಕರ್ನಾಟಕ 11 ವರ್ಷಗಳ ನಂತರ ಫೈನಲ್ ತಲುಪಿದೆ.

ADVERTISEMENT

15 ಮಂದಿಯ ತಂಡ: ಮಯಂಕ್ ಅಗರವಾಲ್, ಕೆ.ಎಲ್‌.ರಾಹುಲ್, ಅನೀಶ್ ಕೆ.ವಿ., ದೇವದತ್ತ ಪಡಿಕ್ಕಲ್ (ನಾಯಕ), ಕರುಣ್ ನಾಯರ್, ಸ್ಮರಣ್ ಆರ್., ಶ್ರೇಯಸ್‌ ಗೋಪಾಲ್, ಕೃತಿಕ್ ಕೃಷ್ಣ (ವಿಕೆಟ್ ಕೀಪರ್), ವಿದ್ವತ್ ಕಾವೇರಪ್ಪ, ವಿದ್ಯಾಧರ ಪಾಟೀಲ, ಪ್ರಸಿದ್ಧ ಕೃಷ್ಣ, ಮೊಹ್ಸಿನ್ ಖಾನ್, ಶಿಖರ್ ಶೆಟ್ಟಿ, ಶ್ರೀಜಿತ್ ಕೆ.ಎಲ್‌. (ವಿಕೆಟ್ ಕೀಪರ್) ಮತ್ತು ವೈಶಾಖ್ ವಿಜಯಕುಮಾರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.