ಕ್ರಿಕೆಟ್
(ಸಾಂಕೇತಿಕ ಚಿತ್ರ)
ಬೆಂಗಳೂರು: ಕರ್ನಾಟಕ ತಂಡವು ಭಾನುವಾರ ನಡೆದ ಮಹಿಳಾ ಟಿ20 ಟ್ರೋಫಿಯ ಪಂದ್ಯದಲ್ಲಿ 75 ರನ್‌ಗಳಿಂದ ಹೈದರಾಬಾದ್ ತಂಡವನ್ನು ಮಣಿಸಿ, ಸೂಪರ್ ಎಂಟರ ಘಟ್ಟಕ್ಕೆ ಅರ್ಹತೆ ಪಡೆಯಿತು.
ಗ್ವಾಲಿಯರ್‌ನ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ವೃಂದಾ ದಿನೇಶ್ (50) ಮತ್ತು ಶಿಶಿರಾ ಗೌಡ (51) ಅವರ ಅರ್ಧಶತಕಗಳ ನೆರವಿನಿಂದ ಕರ್ನಾಟಕ ತಂಡವು 20 ಓವರ್‌ಗಳಲ್ಲಿ 7 ವಿಕೆಟ್‌ಗೆ 167 ರನ್ ಗಳಿಸಿತು.
ಗುರಿ ಬೆನ್ನಟ್ಟಿದ ಹೈದರಾಬಾದ್ ತಂಡವು 92 ರನ್‌ಗಳಿಗೆ ಆಲೌಟ್ ಆಯಿತು. ಈ ಗೆಲುವಿನೊಂದಿಗೆ ಎಲೀಟ್ ಸಿ ಗುಂಪುನಲ್ಲಿ ಕರ್ನಾಟಕ ತಂಡವು ಎರಡನೇ ಸ್ಥಾನ ಪಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.