
ಪಿಟಿಐ
ನವದೆಹಲಿ: ಭಾರತದ ಹಿರಿಯ ಕ್ರಿಕೆಟಿಗ ಕಿರಣ ಮೋರೆ ಅವರು ಅಮೆರಿಕ ಕ್ರಿಕೆಟ್ ತಂಡಕ್ಕೆ ಹಂಗಾಮಿ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.
ಹೋದ ತಿಂಗಳು ಅವರು ಅಮೆರಿಕ ಕ್ರಿಕೆಟ್ ತಂಡಕ್ಕೆ ನಿರ್ದೇಶಕರಾಗಿ ನೇಮಕಗೊಂಡಿದ್ದರು. ಇದೀಗ ಅವರು ಕೋಚ್ ಆಗಿ ಹೆಚ್ಚುವರಿ ಹೊಣೆಯನ್ನು ನಿಭಾಯಿಸಲಿದ್ದಾರೆ. ಈಚೆಗೆ ತಂಡದ ಮುಖ್ಯ ಕೋಚ್ ಪುಬುಡು ದಾಸನಾಯಕೆ ಅವರು ರಾಜೀನಾಮೆ ನೀಡಿದ್ದರು. ಅವರು 2016ರಿಂದ ಕಾರ್ಯನಿರ್ವಹಿಸಿದರು.
56 ವರ್ಷದ ಮೋರೆ ಅವರು ನಿರ್ದೇಶಕರಾಗಿ ಜೂನ್ ತಿಂಗಳಲ್ಲಿ ಅಧಿಕಾರ ಸ್ವೀಕರಿಸಿದ್ದರು. ವೆಸ್ಟ್ ಇಂಡೀಸ್ ಆಟಗಾರ ಕೀರನ್ ಪೊವೆಲ್ ಅವರು ಹೈಪರ್ಫಾರ್ಮೆನ್ಸ್ ಮ್ಯಾನೇಜರ್ ಆಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.