
ಪಿಟಿಐ
ಮುಸ್ತಾಫಿಜುರ್ ರೆಹಮಾನ್
ಗುವಾಹಟಿ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಸೂಚನೆ ನೀಡಿದ ಬೆನ್ನಲ್ಲೇ ಕೊಲ್ಕತ್ತ ನೈಟ್ ರೈಡರ್ಸ್ ತಂಡವು ಬಾಂಗ್ಲಾದೇಶದ ಎಡಗೈ ವೇಗದ ಬೌಲರ್ ಮುಸ್ತಫಿಝುರ್ ರೆಹಮಾನ್ ಅವರನ್ನು ಐಪಿಎಲ್ ತಂಡದಿಂದ ಶನಿವಾರ ಕೈಬಿಟ್ಟಿದೆ.
ಡಿಸೆಂಬರ್ ತಿಂಗಳಲ್ಲಿ ನಡೆದ ಮಿನಿ ಹರಾಜಿನಲ್ಲಿ ಕೆಕೆಆರ್ ತಂಡವು ಪೈಪೋಟಿಯ ನಡುವೆ ₹9.20 ಕೋಟಿ ಮೊತ್ತಕ್ಕೆ (ಮೂಲಬೆಲೆ ₹2 ಕೋಟಿ) ಮುಸ್ತಫಿಝುರ್ ಅವರನ್ನು ತನ್ನ ಪಾಲು ಮಾಡಿಕೊಂಡಿತ್ತು. ಬಿಸಿಸಿಐ ಸೂಚನೆಯನ್ನು ಪಾಲಿಸಿರುವುದಾಗಿ ಫ್ರಾಂಚೈಸಿ ಹೇಳಿಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.