ADVERTISEMENT

ರಾಹುಲ್, ಪಡಿಕ್ಕಲ್ ಶತಕದ ಸೊಬಗು: ಮೊದಲ ದಿನ ಬೃಹತ್ ಮೊತ್ತ ಕಲೆಹಾಕಿದ ಕರ್ನಾಟಕ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಫೆಬ್ರುವರಿ 2026, 12:49 IST
Last Updated 15 ಫೆಬ್ರುವರಿ 2026, 12:49 IST
ಕೆ.ಎಲ್. ರಾಹುಲ್ 
ಕೆ.ಎಲ್. ರಾಹುಲ್    

ಲಖನೌ: ಇಲ್ಲಿ ಆರಂಭವಾಗಿರುವ ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಉತ್ತರಾಖಂಡ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದ ಮೊದಲ ದಿನದಾಟದಲ್ಲಿ ಕೆ.ಎಲ್ ರಾಹುಲ್ ಹಾಗೂ ನಾಯಕ ದೇವದತ್ತ ಪಡಿಕ್ಕಲ್ ಅವರ ಶತಕಗಳ ನೆರವಿನಿಂದ ಕರ್ನಾಟಕ ತಂಡ 2 ವಿಕೆಟ್ ಕಳೆದುಕೊಂಡು 355 ರನ್ ಕಲೆಹಾಕಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಕರ್ನಾಟಕ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಮಯಂಕ್ ಅಗರವಾಲ್ (5 ರನ್) ಗಳಿಸಿ ಪೆವಿಲಿಯನ್ ಸೇರಿಕೊಂಡರು. ಬಳಿಕ ಜೊತೆಯಾದ ಕೆ.ಎಲ್ ರಾಹುಲ್ ಹಾಗೂ ನಾಯಕ ದೇವದತ್ತ ಪಡಿಕ್ಕಲ್ ಉತ್ತರಾಖಂಡ ಬೌಲರ್‌ಗಳ ಮೇಲೆ ಸವಾರಿ ಮಾಡಿದರು. ಈ ಜೋಡಿ ಎರಡನೇ ವಿಕೆಡ್‌ಗೆ 278ರನ್‌ಗಳ ಬೃಹತ್ ಜೊತೆಯಾಟ ಆಡಿದರು.

ದಿನದಾಟ ಮುಕ್ತಾಯಕ್ಕೆ ಕೆಲವೇ ಓವರ್‌ಗಳು ಬಾಕಿ ಇದ್ದಾಗ 211 ಎಸೆತಗಳಲ್ಲಿ 141 ರನ್ ಬಾರಿಸಿದ್ದ ಕೆ.ಎಲ್. ರಾಹುಲ್ ಅವರು ಔಟ್ ಆಗಿ ಪೆವಿಲಿಯನ್ ಸೇರಿಕೊಂಡರು.

ADVERTISEMENT

ಸದ್ಯ, 148 ರನ್ ಗಳಿಸಿರುವ ನಾಯಕ ಪಡಿಕ್ಕಲ್ ಹಾಗೂ 37 ರನ್ ಗಳಿಸಿರುವ ಕರುಣ್ ನಾಯರ್ ಎರಡನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

ದಿನವಿಡಿ ಬೌಲಿಂಗ್ ಮಾಡಿದ ಉತ್ತರಾಖಂಡ್ ಪರ ಆದಿತ್ಯ ರಾವತ್ ಮಾತ್ರ 2 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.