ADVERTISEMENT

ಕೊಹ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸುವ ಅಗತ್ಯವಿಲ್ಲ: ರೋಹಿತ್ ಶರ್ಮಾ

ಪಿಟಿಐ
Published 15 ಜುಲೈ 2022, 8:38 IST
Last Updated 15 ಜುಲೈ 2022, 8:38 IST
   

ಲಂಡನ್: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಮತ್ತೊಮ್ಮೆ ಕಳಪೆ ಫಾರ್ಮ್‌ನಲ್ಲಿರುವ ವಿರಾಟ್ ಕೊಹ್ಲಿ ಬೆಂಬಲಕ್ಕೆ ಆಗಮಿಸಿದ್ದಾರೆ. ಗುರುವಾರ,ಇಂಗ್ಲೆಂಡ್ ವಿರುದ್ಧ ನಡೆದ ಎರಡನೇ ಏಕದಿನ ಪಂದ್ಯದಲ್ಲಿ 19 ರನ್‌ಗಳಿಗೆ ಔಟ್ ಆಗುವ ಮೂಲಕ ಕೊಹ್ಲಿ ಮತ್ತೊಮ್ಮೆ ನಿರಾಸೆ ಮೂಡಿಸಿದ್ದರು.

ಈ ಕುರಿತಂತೆ ಪಂದ್ಯದ ಬಳಿಕ ಪತ್ರಕರ್ತರೊಬ್ಬರು ಪ್ರಶ್ನೆ ಮಾಡಲು ಮುಂದಾದಾಗ ಅರ್ಧಕ್ಕೆ ತಡೆದ ರೋಹಿತ್ ಶರ್ಮಾ, ಕೊಹ್ಲಿ ಫಾರ್ಮ್ ಬಗ್ಗೆ ಏಕಿಷ್ಟು ಚರ್ಚೆ ನಡೆಯುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ. ಬಹಳ ಸಮಯದಿಂದ ಅವರು ಸಾಕಷ್ಟು ಪಂದ್ಯಗಳನ್ನು ಆಡಿದ್ದಾರೆ. ಅಂತಹ ಅದ್ಬುತ ಆಟಗಾರ ತಮ್ಮ ಆಟವನ್ನು ಮತ್ತೊಮ್ಮೆ ಸಾಬೀತುಪಡಿಸುವ ಅಗತ್ಯವಿಲ್ಲ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

ಇಂಗ್ಲೆಂಡ್ ಬ್ಯಾಟರ್ ಜೋಸ್ ಬಟ್ಲರ್ ಸಹ ಕೊಹ್ಲಿ ಬೆಂಬಲಕ್ಕೆ ನಿಂತಿದ್ದು, ಕೊಹ್ಲಿ ಮತ್ತೆ ಲಯ ಕಂಡುಕೊಳ್ಳಲಿದ್ದಾರೆ. ಅವರ ಅಮೋಘ ಆಟ ಇನ್ನಷ್ಟೇ ಬರಬೇಕಿದೆ ಎಂದು ಹೇಳಿದ್ದಾರೆ.

ADVERTISEMENT

ಗಾಯದಿಂದ ಚೇತರಿಸಿಕೊಂಡು ಎರಡನೇ ಏಕದಿನ ಪಂದ್ಯಕ್ಕೆ ಕಮ್‌ಬ್ಯಾಕ್ ಮಾಡಿದ್ದ ಕೊಹ್ಲಿ, ಲಾರ್ಡ್ಸ್‌ನಲ್ಲಿ ಮೂರು ಬೌಂಡರಿಗಳನ್ನು ಹೊಡೆದು ಔಟಾಗಿದ್ದರು. ಹೀಗಾಗಿ, ಮತ್ತೊಮ್ಮೆ ಅವರ ಕಳಪೆ ಫಾರ್ಮ್ ಚರ್ಚೆಗೆ ಗ್ರಾಸವಾಯಿತು.

ಇತ್ತೀಚೆಗೆ, ಟಿ20 ಸರಣಿಯಲ್ಲಿ ಕೊಹ್ಲಿ 1 ಮತ್ತು 11 ರನ್‌ಗೆ ಔಟಾಗಿದ್ದರು. ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್‌ನಲ್ಲಿ ನಿರಾಸೆ ಮೂಡಿಸಿದ್ದರು.

ಆದರೂ, ಭಾರತ ತಂಡದಲ್ಲಿ ನಂ. 3 ಸ್ಥಾನ ಅಬಾಧಿತ ಎಂದು ನಾಯಕ ರೋಹಿತ್ ಶರ್ಮಾ ಹೇಳಿದ್ದರು.

ಇವನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.