ದುಬೈ (ಪಿಟಿಐ): ಭಾರತ ಕ್ರಿಕೆಟ್ ತಣಡದ ನಾಯಕ ವಿರಾಟ್ ಕೊಹ್ಲಿ ಮತ್ತು ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಅವರು ಐಸಿಸಿ ಏಕದಿನ ಕ್ರಿಕೆಟ್ ರ‍್ಯಾಂಕಿಂಗ್‌ನಲ್ಲಿ ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನ ಉಳಿಸಿಕೊಂಡಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ಭಾರತದ ಜಸ್‌ಪ್ರೀತ್ ಬೂಮ್ರಾ ಮೂರನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಆಸ್ಟ್ರೇಲಿಯಾ ಎದುರಿಗಿನ ಸರಣಿಯಲ್ಲಿ ವಿರಾಟ್ ಎರಡು ಅರ್ಧಶತಕ (89 ಮತ್ತು 63) ಗಳಿಸಿದ್ದರು. ಒಟ್ಟು 870 ಅಂಕಗಳು ಅವರ ಖಾತೆಯಲ್ಲಿವೆ. ಅದರಿಂದಾಗಿ ಅವರು ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.
ರೋಹಿತ್ ಆಸ್ಟ್ರೇಲಿಯಾ ಎದುರಿನ ಏಕದಿನ ಸರಣಿಯಲ್ಲಿ ಆಡಿರಲಿಲ್ಲ. 842 ಅಂಕ ಹೊಂದಿರುವ ಅವರು ಎರಡನೇ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನದ ಬಾಬರ್ ಆಜಂ (837), ನ್ಯೂಜಿಲೆಂಡ್‌ನ ರಾಸ್ ಟೇಲರ್ (818) ಮತ್ತು ಆಸ್ಟ್ರೇಲಿಯಾ ತಂಡದ ಆ್ಯರನ್ ಫಿಂಚ್ (791) ನಂತರದ ಸ್ಥಾನಗಳಲ್ಲಿ ಇದ್ದಾರೆ.
ಬೂಮ್ರಾ ಅವರು 700 ಪಾಯಿಂಟ್ಸ್‌ನೊಂದಿಗೆ ತೃತೀಯ ಸ್ಥಾನ ಕಾಪಾಡಿಕೊಂಡಿದ್ದಾರೆ. ನ್ಯೂಜಿಲೆಂಡ್‌ನ ಟ್ರೆಂಟ್ ಬೌಲ್ಟ್ (722) ಮತ್ತು ಅಫ್ಗಾನಿಸ್ತಾನದ ಮುಜೀಬ್ ಉರ್ ರೆಹಮಾನ್ (701) ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನಗಳಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.