ADVERTISEMENT

ಐರ್ಲೆಂಡ್‌ ಪ್ರವಾಸಕ್ಕೆ ವಿವಿಎಸ್‌ ಲಕ್ಷ್ಮಣ್‌ ಕೋಚ್

​ಪ್ರಜಾವಾಣಿ ವಾರ್ತೆ
Published 13 ಜೂನ್ 2022, 10:49 IST
Last Updated 13 ಜೂನ್ 2022, 10:49 IST
ವಿವಿಎಸ್‌ ಲಕ್ಷ್ಮಣ್‌
ವಿವಿಎಸ್‌ ಲಕ್ಷ್ಮಣ್‌   

ನವದೆಹಲಿ: ಈ ತಿಂಗಳ ಕೊನೆಯಲ್ಲಿ ಐರ್ಲೆಂಡ್‌ ಪ್ರವಾಸಕ್ಕೆ ತೆರಳಲಿರುವ ಭಾರತ ಕ್ರಿಕೆಟ್‌ ತಂಡದ ಕೋಚ್‌ ಹುದ್ದೆಯನ್ನು ಎನ್‌ಸಿಎ ಮುಖ್ಯಸ್ಥ ವಿವಿಎಸ್‌ ಲಕ್ಷ್ಮಣ್‌ ಅವರಿಗೆ ವಹಿಸಲಾಗಿದೆ.

ಸೀತಾಂಶು ಕೋಟಕ್, ಸಾಯಿರಾಜ್‌ ಬಹುತುಲೆ ಮತ್ತು ಮುನೀಷ್‌ ಬಾಲಿ ಅವರನ್ನು ಕ್ರಮವಾಗಿ ಬ್ಯಾಟಿಂಗ್, ಬೌಲಿಂಗ್‌ ಮತ್ತು ಫೀಲ್ಡಿಂಗ್‌ ಕೋಚ್‌ ಆಗಿ ನೇಮಿಸಲಾಗಿದೆ.

ಭಾರತ ತಂಡದ ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ ಮತ್ತು ಇತರ ಸಹಾಯಕ ಸಿಬ್ಬಂದಿ, ಟೆಸ್ಟ್‌ ತಂಡದ ಜತೆ ಇಂಗ್ಲೆಂಡ್‌ ಪ್ರವಾಸಕ್ಕೆ ತೆರಳಲಿದ್ದಾರೆ. ಇದೇ ಅವಧಿಯಲ್ಲಿ ಐರ್ಲೆಂಡ್‌ ಪ್ರವಾಸ ಕೂಡಾ ಆಯೋಜನೆಯಾಗಿರುವುದರಿಂದ ಬಿಸಿಸಿಐ ಈ ತೀರ್ಮಾನ ತೆಗೆದುಕೊಂಡಿದೆ.

ADVERTISEMENT

ಐರ್ಲೆಂಡ್‌ ಪ್ರವಾಸದಲ್ಲಿ ಭಾರತ ತಂಡ ಜೂನ್‌ 26 ಮತ್ತು 28 ರಂದು ಎರಡು ಟಿ20 ಪಂದ್ಯಗಳನ್ನು ಆಡಲಿದೆ. ಈ ಸರಣಿಗೆ ಯುವ ಆಟಗಾರರಿಗೆ ಅವಕಾಶ ನೀಡುವ ಸಾಧ್ಯತೆಯಿದೆ.

’ಈಗ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಮಧ್ಯೆಯೇ ದ್ರಾವಿಡ್‌ ಹಾಗೂ ಸೀನಿಯರ್‌ ತಂಡದ ಇತರ ಸಹಾಯಕ ಸಿಬ್ಬಂದಿ ಇಂಗ್ಲೆಂಡ್‌ ಪ್ರವಾಸಕ್ಕೆ ತೆರಳುವರು. ಆದ್ದರಿಂದ ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ಬಹುತುಲೆ, ಕೋಟಕ್‌ ಮತ್ತು ಬಾಲಿ ಅವರೇ ಸಹಾಯಕ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುವರು‘ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.