
ಕೆಎಸ್‌ಸಿಎ ಲಾಂಛನ
ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ 88ನೇ ವಾರ್ಷಿಕ ಸರ್ವಸದಸ್ಯರ ಸಭೆ ಮತ್ತು ಚುನಾವಣೆ ಪ್ರಕ್ರಿಯೆ ಭಾನುವಾರ ನಡೆಯಲಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10.30ರಿಂದ ಸಭೆ ನಡೆಯಲಿದೆ. 11 ರಿಂದ ರಾತ್ರಿ 7ರವರೆಗೆ ಚುನಾವಣೆ ಪ್ರಕ್ರಿಯೆ ನಡೆಯಲಿದೆ. ನಂತರ ಫಲಿತಾಂಶ ಪ್ರಕಟವಾಗಲಿದೆ.
ಎಜಿಎಂ ಮತ್ತು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸುವವರು ತಮ್ಮ ಸದಸ್ಯತ್ವದ ಗುರುತಿನ ಚೀಟಿಯನ್ನು ತರಬೇಕು. ಒಟ್ಟು ಐವರು ಪದಾಧಿಕಾರಿಗಳು ಹಾಗೂ ಆಡಳಿತ ಸಮಿತಿಯ 11 ಸದಸ್ಯರ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಅಧ್ಯಕ್ಷ ಸ್ಥಾನಕ್ಕಾಗಿ ಟೀಮ್ ಬ್ರಿಜೇಶ್ ಬಣದಿಂದ, ದಿ ಪ್ರಿಂಟರ್ಸ್ ಮೈಸೂರು ಪ್ರೈವೇಟ್ ಲಿಮಿಟೆಡ್ (ಪ್ರಜಾವಾಣಿ–ಡೆಕ್ಕನ್ ಹೆರಾಲ್ಡ್ ಪತ್ರಿಕಾ ಸಮೂಹ) ನಿರ್ದೇಶಕ ಕೆ.ಎನ್. ಶಾಂತಕುಮಾರ್ ಮತ್ತು ಟೀಮ್ ಗೇಮ್ ಚೇಂಜರ್ಸ್ ಬಣದಿಂದ, ಮಾಜಿ ಕ್ರಿಕೆಟಿಗ ಬಿ.ಕೆ. ವೆಂಕಟೇಶ್ ಪ್ರಸಾದ್ ಅವರು ಸ್ಪರ್ಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.