ADVERTISEMENT

ಕೆಎಸ್‌ಸಿಎ ಅಧ್ಯಕ್ಷ ಸ್ಥಾನಕ್ಕೆ ಕೆ.ಎನ್. ಶಾಂತಕುಮಾರ್ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2025, 15:59 IST
Last Updated 6 ನವೆಂಬರ್ 2025, 15:59 IST
ಕೆ.ಎನ್. ಶಾಂತಕುಮಾರ್ 
ಕೆ.ಎನ್. ಶಾಂತಕುಮಾರ್    

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕಾಗಿ ದಿ ಪ್ರಿಂಟರ್ಸ್ ಮೈಸೂರು ‍ಪ್ರೈವೇಟ್ ಲಿಮಿಟೆಡ್ (ಪ್ರಜಾವಾಣಿ‘ ಮತ್ತು ‘ಡೆಕ್ಕನ್ ಹೆರಾಲ್ಡ್ ಪತ್ರಿಕಾ ಸಮೂಹ) ನಿರ್ದೇಶಕ ಕೆ.ಎನ್. ಶಾಂತಕುಮಾರ್ ಅವರು ಸ್ಪರ್ಧಿಸಲಿದ್ದಾರೆ.

ಕೆಎಸ್‌ಸಿಎ ನಿಕಟಪೂರ್ವ ಅಧ್ಯಕ್ಷ ಎ.ರಘುರಾಮ್ ಭಟ್ ಅವರ ಅಧಿಕಾರಾವಧಿಯು ಸೆಪ್ಟೆಂಬರ್ 30ರಂದು ಮುಕ್ತಾಯವಾಗಿತ್ತು. ಅವರು ಇತ್ತೀಚೆಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಖಜಾಂಚಿಯಾಗಿ ನೇಮಕವಾಗಿದ್ದಾರೆ. ಭಾರತ ತಂಡದ ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್ ಬಣದಿಂದ ಶಾಂತಕುಮಾರ್ ಅವರು ಕಣಕ್ಕಿಳಿಯಲಿದ್ದಾರೆ.

ಶಾಂತಕುಮಾರ್ ಅವರು ಎಂಟು ಒಲಿಂಪಿಕ್ ಕೂಟಗಳಲ್ಲಿ ಪತ್ರಿಕಾ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸಿದ್ದಾರೆ. ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ವಿವಿಧ ಕ್ರೀಡಾ ಸಂಸ್ಥೆಗಳ ಆಡಳಿತದಲ್ಲಿ ಸಕ್ರಿಯರಾಗಿದ್ದಾರೆ.

ADVERTISEMENT

ಪಟೇಲ್ ಬಣದ ಎದುರಾಳಿ ತಂಡದಿಂದ ಭಾರತ ತಂಡದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಸಾಧ್ಯತೆ ನಿಚ್ಚಳವಾಗಿದೆ. ಸಮಿತಿಯ ಇನ್ನುಳಿದ ಸ್ಥಾನಗಳಿಗೆ ಉಭಯ ಬಣಗಳಿಂದ ಅಭ್ಯರ್ಥಿಗಳನ್ನು ಇನ್ನೂ ಪ್ರಕಟಿಸಿಲ್ಲ.

12ರಿಂದ ನಾಮಪತ್ರ ಸಲ್ಲಿಕೆ: ಕೆಎಸ್‌ಸಿಎ ಚುನಾವಣೆಗೆ ಇದೇ 12ರಿಂದ 15ರವರೆಗೆ ನಾಮಪತ್ರ ಸಲ್ಲಿಕೆ ನಡೆಯಲಿದೆ. 17ರಂದು ಕಣದಲ್ಲಿರುವವರ ಅಂತಿಮ ಪಟ್ಟಿ ಬಿಡುಗಡೆಯಾಗಲಿದೆ. ನವೆಂಬರ್ 30ರಂದು ಚುನಾವಣೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.