ADVERTISEMENT

ಕೆಎಸ್‌ಸಿಎಯಲ್ಲಿ ಜುಲೈನಿಂದ ಕ್ರಿಕೆಟ್ ಚಟುವಟಿಕೆ

​ಪ್ರಜಾವಾಣಿ ವಾರ್ತೆ
Published 10 ಜೂನ್ 2020, 21:17 IST
Last Updated 10 ಜೂನ್ 2020, 21:17 IST
   

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯು ತನ್ನ ಎಲ್ಲ ಕ್ರಿಕೆಟ್‌ ಚಟುವಟಿಕೆಗಳನ್ನು ಮುಂದಿನ ತಿಂಗಳಿನ ಮೊದಲ ವಾರದಲ್ಲಿ ಆರಂಭಿಸಲು ನಿರ್ಧರಿಸಿದೆ.

‘ಹೊಸ ವೇಳಾಪಟ್ಟಿಯನ್ನು ರಚಿಸಲಾಗಿದೆ. ಕೊರೊನಾ ವೈರಸ್‌ ಸೋಂಕು ಪ್ರಸರಣದ ಪರಿಸ್ಥಿತಿಯನ್ನು ಅವಲೋಕಿಸಲಾಗುತ್ತಿದೆ. ಜುಲೈ ಮೊದಲ ವಾರದಲ್ಲಿ ಚಟುವಟಿಕಗಳ ಮರುಚಾಲನೆಗೆ ಯೋಚಿಸಲಾಗಿದೆ. ಸರ್ಕಾರವು ನಿಗದಿಪಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸಲಾಗುವುದು. ಸಿಬ್ಬಂದಿ, ಆಟಗಾರರು ಮತ್ತಿತರರ ಆರೋಗ್ಯ ಮತ್ತು ಸುರಕ್ಷತೆಗೆ ಆದ್ಯತೆ ನೀಡಲಾಗುವುದು. ತರಬೇತಿ ಮತ್ತಿತರ ಚಟುವಟಿಕೆಗಳಿಗೆ ಅವಕಾಶ ನೀಡಲಾಗುವುದು’ ಎಂದು ಕೆಎಸ್‌ಸಿಎ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT