ADVERTISEMENT

ಬಾಲ್ಯದ ಗೆಳತಿ ಜತೆ ಟೀಮ್ ಇಂಡಿಯಾ ಆಟಗಾರ ಕುಲದೀಪ್ ನಿಶ್ಚಿತಾರ್ಥ

​ಪ್ರಜಾವಾಣಿ ವಾರ್ತೆ
Published 5 ಜೂನ್ 2025, 22:30 IST
Last Updated 5 ಜೂನ್ 2025, 22:30 IST
ಕುಲದೀಪ್ ಯಾದವ್‌ ಜೊತೆ ವಂಶಿಕಾ
ಕುಲದೀಪ್ ಯಾದವ್‌ ಜೊತೆ ವಂಶಿಕಾ   

ಲಖನೌ: ಭಾರತ ಕ್ರಿಕೆಟ್‌ ತಂಡದ ಸ್ಪಿನ್ನರ್‌ ಕುಲದೀಪ್ ಯಾದವ್‌ ಅವರು ಬಾಲ್ಯದ ಗೆಳತಿ ವಂಶಿಕಾ ಜೊತೆಗೆ ಬುಧವಾರ ನಿಶ್ಚಿತಾರ್ಥ ಮಾಡಿಕೊಂಡರು.

ಬ್ಯಾಟರ್‌ ರಿಂಕು ಸಿಂಗ್‌ ಸೇರಿ ಉತ್ತರ ಪ್ರದೇಶದ ಹಲವು ಕ್ರಿಕೆಟಿಗರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ವಂಶಿಕಾ ಅವರು ಎಲ್‌ಐಸಿಯಲ್ಲಿ ಉದ್ಯೋಗದಲ್ಲಿದ್ದು, ಕಾನ್ಪುರದಲ್ಲಿ ನೆಲೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕುಲದೀಪ್ ಮತ್ತು ವಂಶಿಕಾ ಅವರು ಪರಸ್ಪರ ಉಂಗುರ ಬದಲಾಯಿಸಿಕೊಳ್ಳುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ.

ADVERTISEMENT

ಭಾರತ ಪರ 13 ಟೆಸ್ಟ್‌ ಪಂದ್ಯಗಳನ್ನು ಆಡಿರುವ ಕುಲದೀಪ್, 56 ವಿಕೆಟ್‌ಗಳನ್ನು ಪಡೆದಿದ್ದಾರೆ. ಐಪಿಎಲ್‌ನ ಈ ವರ್ಷದ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಆಡಿದ ಅವರು 15 ವಿಕೆಟ್‌ಗಳನ್ನು ಪಡೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.