ADVERTISEMENT

ಪಾಸ್‌ಪೋರ್ಟ್ ಒಪ್ಪಿಸಲು ಲಂಡನ್‌ನ ಭಾರತೀಯ ಹೈಕಮಿಷನ್‌ಗೆ ಲಲಿತ್ ಮೋದಿ ಅರ್ಜಿ

ಪಿಟಿಐ
Published 7 ಮಾರ್ಚ್ 2025, 14:22 IST
Last Updated 7 ಮಾರ್ಚ್ 2025, 14:22 IST
<div class="paragraphs"><p>ಲಲಿತ್ ಮೋದಿ ಹಾಗೂ ರಿಮಾ ಬೌರಿ</p></div>

ಲಲಿತ್ ಮೋದಿ ಹಾಗೂ ರಿಮಾ ಬೌರಿ

   

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸಂಸ್ಥಾಪಕ ಲಲಿತ್ ಮೋದಿ ಅವರು ತಮ್ಮ ಭಾರತೀಯ ಪಾಸ್‌ಪೋರ್ಟ್ ಅನ್ನು ಒಪ್ಪಿಸಲು ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯ(ಎಂಇಎ) ಶುಕ್ರವಾರ ಇದನ್ನು ದೃಢಪಡಿಸಿದೆ.

ADVERTISEMENT

ಲಲಿತ್ ಮೋದಿ, ದಕ್ಷಿಣ ಪೆಸಿಫಿಕ್ ದ್ವೀಪ ರಾಷ್ಟ್ರವಾದ ವನವಾಟುವಿನ ಪೌರತ್ವವನ್ನು ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಅವರು 2010ರಲ್ಲಿ ಭಾರತವನ್ನು ತೊರೆದು ಲಂಡನ್‌ನಲ್ಲಿ ವಾಸಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಐಪಿಎಲ್‌ನ ಅಧ್ಯಕ್ಷರಾಗಿದ್ದಾಗ ಕೋಟ್ಯಂತರ ರೂಪಾಯಿಗಳ ದುರುಪಯೋಗದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಲಲಿತ್ ಮೋದಿ, ಭಾರತೀಯ ತನಿಖಾ ಸಂಸ್ಥೆಗಳಿಗೆ ಬೇಕಾಗಿದ್ದಾರೆ.

‘ಲಂಡನ್‌ನ ಭಾರತದ ಹೈಕಮಿಷನ್‌ ಕಚೇರಿಯಲ್ಲಿ ತಮ್ಮ ಪಾಸ್‌ಪೋರ್ಟ್ ಒಪ್ಪಿಸಲು ಅವರು ಅರ್ಜಿ ಸಲ್ಲಿಸಿದ್ದಾರೆ’ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

‘ಅಸ್ತಿತ್ವದಲ್ಲಿರುವ ನಿಯಮಗಳು ಮತ್ತು ಕಾರ್ಯವಿಧಾನಗಳ ಅಡಿಯಲ್ಲಿ ಮನವಿಯನ್ನು ಪರಿಶೀಲಿಸಲಾಗುವುದು. ಅವರು ವನವಾಟುವಿನ ಪೌರತ್ವವನ್ನು ಪಡೆದುಕೊಂಡಿದ್ದಾರೆ ಎಂದು ನಮಗೆ ತಿಳಿಸಲಾಗಿದೆ. ಕಾನೂನಿನಡಿಯಲ್ಲಿನಾವು ಅವರ ವಿರುದ್ಧ ಪ್ರಕರಣವನ್ನು ಮುಂದುವರಿಸುತ್ತೇವೆ’ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.