ಲಂಕಾ ಪ್ರೀಮಿಯರ್ ಲೀಗ್
ಚಿತ್ರ ಕೃಪೆ: ಎಕ್ಸ್ @KKR_Xtra
ನವದೆಹಲಿ: ಡಿಸೆಂಬರ್ 1 ರಿಂದ ಆರಂಭವಾಗಲಿರುವ 6ನೇ ಆವೃತ್ತಿಯ ಲಂಕಾ ಪ್ರೀಮಿಯರ್ ಲೀಗ್‌ನಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಕ್ರಿಕೆಟಿಗರು ಕಾಣಿಸಿಕೊಳ್ಳಲಿದ್ದಾರೆ ಎಂದು ಎಲ್‌ಪಿಎಲ್ ಆಯೋಜಕರು ಸೋಮವಾರ ತಿಳಿಸಿದ್ದಾರೆ.
ಪ್ರತಿಷ್ಠಿತ ಎಲ್‌ಪಿಎಲ್ ಟೂರ್ನಿಯಲ್ಲಿ ಒಟ್ಟು 24 ಪಂದ್ಯಗಳು ನಡೆಯಲಿದ್ದು, ಇದರಲ್ಲಿ 4 ನಾಕೌಟ್ ಪಂದ್ಯಗಳನ್ನು ಒಳಗೊಂಡಿದೆ. ಈ ಟೂರ್ನಮೆಂಟ್ ಕೊಲಂಬೊದ ಆರ್. ಪ್ರೇಮದಾಸ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನ, ಕ್ಯಾಂಡಿಯ ಪಲ್ಲೆಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನ ಹಾಗೂ ರಂಗಿರಿ ದಾಂಬುಲಾ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಎಲ್‌ಪಿಎಲ್ ಆಯೋಜಕರು, 'ಇದೇ ಮೊದಲ ಬಾರಿಗೆ ಭಾರತೀಯ ಕ್ರಿಕೆಟಿಗರು ಈ ಟೂರ್ನಮೆಂಟ್‌ನಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಅವರ ಹೆಸರುಗಳನ್ನು ಕೂಡ ಶೀಘ್ರದಲ್ಲೆ ಬಹಿರಂಗಪಡಿಸಲಾಗುವುದು. ಇದು ಹೊರದೇಶದ ಕ್ರಿಕೆಟ್ ಅಭಿಮಾನಿಗಳನ್ನು ಆಕರ್ಷಿಸಲಿದೆ' ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.