ADVERTISEMENT

ಕ್ರಿಕೆಟ್‌: ಶಾಂತಾ ರಂಗಸ್ವಾಮಿಗೆ ಜೀವಮಾನ ಸಾಧನೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2020, 18:07 IST
Last Updated 31 ಅಕ್ಟೋಬರ್ 2020, 18:07 IST
ಶಾಂತಾ ರಂಗಸ್ವಾಮಿ
ಶಾಂತಾ ರಂಗಸ್ವಾಮಿ   

ಬೆಂಗಳೂರು: ಭಾರತ ಮಹಿಳಾ ಕ್ರಿಕೆಟ್ ತಂಡದ ಮಾಜಿ ಆಟಗಾರ್ತಿ ಶಾಂತಾ ರಂಗಸ್ವಾಮಿ ಅವರಿಗೆ ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಭಾರತ ಮಹಿಳಾ ಕ್ರಿಕೆಟ್ ತಂಡದ ಮೊದಲ ಮತ್ತು ಟೆಸ್ಟ್ ಸರಣಿ ಜಯಿಸಿದ ಪ್ರಥಮ ನಾಯಕಿ ಎಂಬ ಹೆಗ್ಗಳಿಕೆ ಶಾಂತಾ ಅವರದ್ದು. ಬೆಂಗಳೂರಿನ ಶಾಂತಾ ಅವರು 1976 ರಿಂದ ಸುಮಾರು 14 ವರ್ಷಗಳ ಕಾಲ ಭಾರತ ತಂಡದಲ್ಲಿ 16 ಟೆಸ್ಟ್ ಮತ್ತು 19 ಏಕದಿನ ಪಂದ್ಯಗಳನ್ನು ಆಡಿದ್ದರು. ಕೆಲವು ವರ್ಷಗಳ ಹಿಂದೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ಶಾಂತಾ ಅವರಿಗೆ ಜೀವಮಾನ ಸಾಧನೆ ಪುರಸ್ಕಾರ ನೀಡಿ ಗೌರವಿಸಿತ್ತು.

’ಕರ್ನಾಟಕ ಸರ್ಕಾರವು ಗೌರವಿಸುತ್ತಿರುವುದು ಸಂತಸ ತಂದಿದೆ‘ ಎಂದು ಶಾಂತಾ ’ಪ್ರಜಾವಾಣಿ‘ಗೆ ಪ್ರತಿಕ್ರಿಯಿಸಿದರು.

ADVERTISEMENT

ಅವರು ಸದ್ಯ ಬಿಸಿಸಿಐ ಅಪೆಕ್ಸ್‌ ಕೌನ್ಸಿಲ್ ಸದಸ್ಯೆಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ಸೋಮವಾರ (ನ.2) ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಾಂತಾ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.