
ಶಿಖರ್ ಧವನ್, ಸುರೇಶ್ ರೈನಾ
(ಪಿಟಿಐ ಚಿತ್ರ)
ನವದೆಹಲಿ: ಬೆಟ್ಟಿಂಗ್ ಸಂಬಂಧಿ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರರಾದ ಸುರೇಶ್ ರೈನಾ ಹಾಗೂ ಶಿಖರ್ ಧವನ್ ಅವರಿಗೆ ಸೇರಿದ ₹11.14 ಕೋಟಿ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.
ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
'1xBet' ಹೆಸರಿನ ಆನ್‌ಲೈನ್ ಬೆಟ್ಟಿಂಗ್ ವೆಬ್‌ಸೈಟ್ ವಿರುದ್ಧದ ಪ್ರಕರಣದಲ್ಲಿ ಧವನ್ ಅವರಿಗೆ ಸೇರಿದ ₹4.5 ಕೋಟಿ ಮೌಲ್ಯದ ಸ್ಥಿರಾಸ್ತಿ ಮತ್ತು ರೈನಾ ಅವರ ₹6.64 ಕೋಟಿ ಮೌಲ್ಯದ ಮ್ಯೂಚುವಲ್ ಫಂಡ್ ಅನ್ನು ಮುಟ್ಟುಗೋಲು ಹಾಕಲು ತಾತ್ಕಾಲಿಕ ಆದೇಶ ಹೊರಡಿಸಲಾಗಿದೆ.
ಮಾಜಿ ಕ್ರಿಕೆಟಿಗರಿಬ್ಬರೂ ಗೊತ್ತಿದ್ದೇ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬುದು ತನಿಖೆಯಿಂದ ಗೊತ್ತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ತನಿಖೆಯ ಭಾಗವಾಗಿ ಮಾಜಿ ಕ್ರಿಕೆಟಿಗರಾದ ಯುವರಾಜ್ ಸಿಂಗ್, ರಾಬಿನ್ ಉತ್ತಪ್ಪ, ನಟರಾದ ಸೋನು ಸೂದ್, ಊರ್ವಶಿ ರೌಟೇಲಾ, ಅಂಕುಶ್ ಹಜ್ರಾ ಮತ್ತು ಟಿಎಂಸಿ ಮಾಜಿ ಸಂಸದೆ ಮಿಮಿ ಚಕ್ರವರ್ತಿ ಅವರನ್ನು ವಿಚಾರಣೆಗೊಳಪಡಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.