ಶಿಖರ್ ಧವನ್
(ಪಿಟಿಐ ಚಿತ್ರ)
ನವದೆಹಲಿ: ಕಾನೂನುಬಾಹಿರ ಬೆಟ್ಟಿಂಗ್ ಆ್ಯಪ್ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಭಾರತದ ಮಾಜಿ ಕ್ರಿಕೆಟಿಗ ಶಿಖರ್ ಧವನ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಇಂದು (ಗುರುವಾರ) ಸಮನ್ಸ್ ಜಾರಿ ಮಾಡಿದೆ.
'1xBet' ಬೆಟ್ಟಿಂಗ್ ಆ್ಯಪ್‌ಗೆ ಸಂಬಂಧಿಸಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಅಡಿಯಲ್ಲಿ ಇ.ಡಿ ತನಿಖೆ ನಡೆಸುತ್ತಿದೆ.
ಈ ಪ್ರಕರಣದಲ್ಲಿ 39 ವರ್ಷದ ಶಿಖರ್ ಧವನ್ ಅವರ ಹೇಳಿಕೆ ದಾಖಲಿಸಿಕೊಳ್ಳಲಾಗುವುದು ಎಂದು ಇ.ಡಿ ಮೂಲಗಳು ತಿಳಿಸಿವೆ.
ಈ ಆ್ಯಪ್ ಜಾಹೀರಾತಿಗೆ ಸಂಬಂಧಿಸಿದಂತೆ ಶಿಖರ್ ಧವನ್ ಅವರ ಸಂಪರ್ಕವನ್ನು ಪರಿಶೀಲಿಸಲು ಇ.ಡಿ ಮುಂದಾಗಿದೆ.
ಅಕ್ರಮ ಬೆಟ್ಟಿಂಗ್ ಆ್ಯಪ್‌ಗಳಲ್ಲಿ ಕೋಟ್ಯಂತರ ರೂಪಾಯಿ ವಂಚನೆಗೆ ಸಂಬಂಧಿಸಿದ ಹಲವು ಪ್ರಕರಣಗಳಲ್ಲಿ ಇ.ಡಿ ತನಿಖೆ ನಡೆಸುತ್ತಿದೆ.
ಕಳೆದ ತಿಂಗಳಷ್ಟೇ ಸುರೇಶ್ ರೈನಾ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.
ಇತ್ತೀಚೆಗಷ್ಟೇ ರಿಯಲ್-ಮನಿ ಆನ್‌ಲೈನ್ ಗೇಮಿಂಗ್ ಅನ್ನು ಕೇಂದ್ರ ಸರ್ಕಾರ ನಿಷೇಧಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.