ಢಾಕಾ: ಬಾಂಗ್ಲಾದೇಶದ ಅನುಭವಿ ಬ್ಯಾಟರ್ ಮಹಮದುಲ್ಲಾ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಬುಧವಾರ ನಿವೃತ್ತಿ ಘೋಷಿಸಿದ್ದಾರೆ.
2021ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಹಾಗೂ 2024ರಲ್ಲಿ ಟಿ20 ಮಾದರಿಗೆ ನಿವೃತ್ತಿ ಘೋಷಿಸಿದ್ದ 39 ವರ್ಷ ವಯಸ್ಸಿನ ಮಹಮದುಲ್ಲಾ ಇದೀಗ ಏಕದಿನ ಕ್ರಿಕೆಟ್‌ನಿಂದಲೂ ದೂರ ಸರಿದಿದ್ದಾರೆ.
ಏಕದಿನ ಮಾದರಿಯಲ್ಲಿ ಬಾಂಗ್ಲಾದೇಶ ಪರ ಹೆಚ್ಚು ರನ್ ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಮಹಮದುಲ್ಲಾ ನಾಲ್ಕನೇ ಸ್ಥಾನದಲ್ಲಿದ್ದಾರೆ. 239 ಏಕದಿನ ಪಂದ್ಯಗಳಲ್ಲಿ ನಾಲ್ಕು ಶತಕ ಮತ್ತು 32 ಅರ್ಧಶತಕ ಸೇರಿದಂತೆ 36.46ರ ಸರಾಸರಿಯಲ್ಲಿ 5,689 ರನ್ ಗಳಿಸಿದ್ದಾರೆ. ಜೊತೆಗೆ 82 ವಿಕೆಟ್ ಪಡೆದಿದ್ದಾರೆ.
ಮಹಮದುಲ್ಲಾ ತಮ್ಮ ನಾಲ್ಕೂ ಶತಕಗಳನ್ನು ಐಸಿಸಿ ಟೂರ್ನಿಗಳಲ್ಲೇ ದಾಖಲಿಸಿರುವುದು ವಿಶೇಷ. 2015ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸತತ ಎರಡು ಶತಕ ಬಾರಿಸಿದ್ದ ಅವರು, 2017ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಹಾಗೂ 2023ರ ಏಕದಿನ ವಿಶ್ವಕಪ್‌ನಲ್ಲಿ ತಲಾ ಒಂದೊಂದು ಶತಕ ಗಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.