ADVERTISEMENT

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸ್ಫೋಟಕ; ಬೆದರಿಕೆಯೊಡ್ಡಿದವನ ಬಂಧಿಸಿದ ಪೊಲೀಸರು

ಪಿಟಿಐ
Published 11 ಅಕ್ಟೋಬರ್ 2023, 5:27 IST
Last Updated 11 ಅಕ್ಟೋಬರ್ 2023, 5:27 IST
<div class="paragraphs"><p>ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣ</p></div>

ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣ

   

ರಾಯಿಟರ್ಸ್ ಚಿತ್ರ

ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದ ಮೇಲೆ ಬಾಂಬ್ ದಾಳಿ ನಡೆಸುವುದಾಗಿ ಇ–ಮೇಲ್ ಮೂಲಕ ಬೆದರಿಕೆಯೊಡ್ಡಿದ್ದ ವ್ಯಕ್ತಿಯನ್ನು ಅಹಮದಾಬಾದ್ ಅಪರಾಧ ದಳ ಪೊಲೀಸರು ಬುಧವಾರ ಬಂಧಿಸಿದ್ದಾರೆ. 

ಮಧ್ಯಪ್ರದೇಶ ಮೂಲದ ಈ ವ್ಯಕ್ತಿಯನ್ನು ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಯಾವ ಅಪರಾಧ ಹಿನ್ನೆಲೆ ಹೊಂದಿಲ್ಲ. ಕ್ರೀಡಾಂಗಣದಲ್ಲಿ ಸ್ಫೋಟ ಸಂಭವಿಸಲಿದೆ ಎಂದು ಒಂದು ಸಾಲಿನ ಇ–ಮೇಲ್ ಕಳುಹಿಸಿದ್ದ. ಆದರೆ ಅದರ ವಿವರಣೆ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ತನ್ನ ಮೊಬೈಲ್ ಮೂಲಕ ತನ್ನ ಹೆಸರಿನಲ್ಲಿರುವ ಇ–ಮೇಲ್ ವಿಳಾಸವನ್ನು ಈತ ಬಳಸಿದ್ದ. ಭಾರತ–ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಗುಜರಾತ್ ಪೊಲೀಸ್, ಎನ್‌ಎಸ್‌ಜಿ, ಆರ್‌ಎಎಫ್‌ ಹಾಗೂ ಗೃಹರಕ್ಷಕ ದಳ ಸೇರಿದಂತೆ 11 ಸಾವಿರ ಪೊಲೀಸರನ್ನು ನಿಯೋಜಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ಭಾರತದಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ ಕ್ರಿಕೆಟ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ (ಅ. 14) ಪಂದ್ಯ ಇದೇ ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.