ವಿಕೆಟ್ ತೆಗೆದ ಸಂಭ್ರಮದಲ್ಲಿ ಆಸೀಸ್ ವೇಗಿ ಸ್ಟಾರ್ಕ್
ಚಿತ್ರ ಕೃಪೆ: @Visharad_KW22
ಪರ್ತ್: ಬಹುನಿರೀಕ್ಷಿತ ಆ್ಯಷಸ್ ಟೆಸ್ಟ್ ಸರಣಿ ಇಂದಿನಿಂದ (ಶುಕ್ರವಾರ) ಪರ್ತ್ ಮೈದಾನದಲ್ಲಿ ಆರಂಭಗೊಂಡಿದೆ. ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ. ಈ ಪಂದ್ಯದ ಮೊದಲ ಇನಿಂಗ್ಸ್‌ನಲ್ಲೇ ಆಸೀಸ್ ವೇಗಿ ಮಿಚೆಲ್ ಸ್ಟಾರ್ಕ್ ಹೊಸ ದಾಖಲೆ ಬರೆದಿದ್ದಾರೆ.
ಆಸೀಸ್ ನಾಯಕ ಪ್ಯಾಟ್ ಕಮಿನ್ಸ್ ಹಾಗೂ ಜೋಶ್ ಹ್ಯಾಜಲ್‌ವುಡ್ ಅವರ ಅನುಪಸ್ಥಿತಿಯಲ್ಲಿ ವೇಗದ ಬೌಲಿಂಗ್ ಜವಾಬ್ದಾರಿ ವಹಿಸಿಕೊಂಡ ಮಿಚೆಲ್ ಸ್ಟಾರ್ಕ್ ಮೊದಲ ಸೆಷನ್‌ನಲ್ಲೇ ಇಂಗ್ಲೆಂಡ್ ತಂಡದ ಮೂವರು ಟಾಪ್ ಆರ್ಡರ್ ಬ್ಯಾಟರ್‌ಗಳನ್ನು ಪೆವಿಲಿಯನ್‌ಗೆ ಕಳಿಸಿದರು. ಆ ಮೂಲಕ ಆ್ಯಷಸ್ ಟೆಸ್ಟ್ ಸರಣಿಯೊಂದರಲ್ಲೇ 100 ವಿಕೆಟ್ ಪಡೆದ ಸಾಧನೆ ಮಾಡಿದರು.
ಆ್ಯಷಸ್ ಟೆಸ್ಟ್‌ನಲ್ಲಿ 100 ವಿಕೆಟ್ ಪಡೆದ ಮೊದಲ ಎಡಗೈ ವೇಗಿ
ಆ್ಯಷಸ್ ಟೆಸ್ಟ್ ಸರಣಿಯಲ್ಲಿ 100 ವಿಕೆಟ್ ಪಡೆದ 21ನೇ ಬೌಲರ್ ಎಂಬ ಹೆಗ್ಗಳಿಕೆಗೆ ಸ್ಟಾರ್ಕ್ ಪಾತ್ರಾರಾದರು. ಮಾತ್ರವಲ್ಲ, ಆ್ಯಷಸ್ ಟೆಸ್ಟ್‌ನಲ್ಲಿ 100 ವಿಕೆಟ್ ಪಡೆದ ಮೊದಲ ‘ಎಡಗೈ ವೇಗಿ’ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಸ್ಟಾರ್ ತಮ್ಮ ಮೊದಲ ಓವರ್‌ನಲ್ಲೇ ಇಂಗ್ಲೆಂಡ್ ತಂಡದ ಆರಂಭಿಕ ಬ್ಯಾಟರ್ ಜಾಕ್ ಕ್ರಾಲಿ (0) ಔಟ್ ಮಾಡಿದರು. ನಂತರ ಬೆನ್ ಡಕ್ಕೆಟ್ (21) ಹಾಗೂ ಜೋ ರೂಟ್ ಅವರನ್ನು (0) ಔಟ್ ಮಾಡುವ ಮೂಲಕ ಈ ಮೈಲಿಗಲ್ಲು ತಲುಪಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.