ಮಿಚೆಲ್ ಸ್ಟಾರ್ಕ್
(ಚಿತ್ರ ಕೃಪೆ: ಐಸಿಸಿ)
ಮೆಲ್ಬರ್ನ್: ಆಸ್ಟ್ರೇಲಿಯಾದ ಎಡಗೈ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್, ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ ಮೇಲೆ ಹೆಚ್ಚಿನ ಗಮನ ಕೇಂದ್ರಿಕರಿಸುವ ನಿಟ್ಟಿನಲ್ಲಿ ಚುಟುಕು ಕ್ರಿಕೆಟ್‌ಗೆ ವಿದಾಯ ಹೇಳಿರುವುದಾಗಿ 35 ವರ್ಷದ ಸ್ಟಾರ್ಕ್ ತಿಳಿಸಿದ್ದಾರೆ.
ಆಸ್ಟ್ರೇಲಿಯಾದ ಪರ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಗಳಿಸಿದ ಬೌಲರ್‌ಗಳ ಸಾಲಿನಲ್ಲಿ ಮಿಚೆಲ್ ಸ್ಟಾರ್ಕ್ ಎರಡನೇ ಸ್ಥಾನದಲ್ಲಿದ್ದಾರೆ.
ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾದ ಪರ ಅತಿ ಹೆಚ್ಚು ವಿಕೆಟ್ ಗಳಿಸಿದ ದಾಖಲೆ ಆ್ಯಡಂ ಜಂಪಾ (130) ಹೆಸರಲ್ಲಿದೆ.
2012ರಲ್ಲಿ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಸ್ಟಾರ್ಕ್ ಪದಾರ್ಪಣೆ ಮಾಡಿದ್ದರಲ್ಲದೆ 65 ಪಂದ್ಯಗಳಲ್ಲಿ ಒಟ್ಟು 79 ವಿಕೆಟ್‌ಗಳನ್ನು ಗಳಿಸಿದ್ದಾರೆ.
ಮಿಚೆಲ್ ಸ್ಟಾರ್ಕ್ 2021ರ ಐಸಿಸಿ ಟಿ20 ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ತಂಡದ ಸದಸ್ಯರಾಗಿದ್ದರು.
ಯಾವತ್ತೂ ಟೆಸ್ಟ್ ಕ್ರಿಕೆಟ್‌ಗೆ ನನ್ನ ಮೊದಲ ಆದತ್ಯೆಯಾಗಿದೆ. ಆದರೂ ಆಸೀಸ್ ಪರ ಟಿ20 ಕ್ರಿಕೆಟ್ ಆನಂದಿಸಿದ್ದೇನೆ. ಮುಂಬರುವ ಭಾರತದ ಟೆಸ್ಟ್ ಪ್ರವಾಸ, ಆ್ಯಶಸ್ ಮತ್ತು 2027ರ ಏಕದಿನ ವಿಶ್ವಕಪ್ ಟೂರ್ನಿಯನ್ನು ಎದುರು ನೋಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.