ನವದೆಹಲಿ: ಭಾರತದ ಹಿರಿಯ ಕ್ರಿಕೆಟಿಗ ಮೊಹಮ್ಮದ್ ಕೈಫ್ ಅವರನ್ನು ಐಪಿಎಲ್‌ನಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ ತಂಡದ ಸಹಾಯಕ ಕೋಚ್ ಆಗಿ ನೇಮಕ ಮಾಡಲಾಗಿದೆ ಎಂದು ತಂಡ ಶುಕ್ರವಾರ ತಿಳಿಸಿದೆ.
‘ಡೇರ್ ಡೆವಿಲ್ಸ್ ಭಾಗವಾಗಿರುವುದಕ್ಕೆ ನನಗೆ ಹೆಮ್ಮೆ ಎನಿಸುತ್ತಿದೆ. ಸಹಾಯ ಮಾಡುವ ಮನೋಭಾವವಿರುವ ಯುವ ಆಟಗಾರರು ತಂಡದಲ್ಲಿದ್ದಾರೆ. ಐಪಿಎಲ್‌ನಲ್ಲಿ ತಂಡವನ್ನು ಎಲ್ಲರೂ ಗುರುತಿಸುವಂತೆ ಮಾಡುತ್ತೇನೆ’ ಎಂದು ಕೈಫ್ ಭರವಸೆ ನೀಡಿದ್ದಾರೆ.
ಕೈಫ್,ಈ ಮೊದಲು ಚತ್ತೀಸ್‌ಗಡ ರಣಜಿ ತಂಡದದಲ್ಲಿ ಕಾರ್ಯ ನಿರ್ವಹಿಸಿದ್ದರು.
‘ಕೈಫ್ ಅವರ ಅನುಭವವು ನಮ್ಮ ತಂಡ ಈ ಬಾರಿಯ ಟೂರ್ನಿಯಲ್ಲಿ ಉತ್ತಮ ಸಾಧನೆ ಮಾಡಲು ನೆರವಾಗಲಿದೆ’ ಎಂದು ಡೆಲ್ಲಿ ಡೇರ್ ಡೆವಿಲ್ಸ್‌ನ ನಿರ್ದೇಶಕ ಮುಸ್ತಾಫ ಗೌಸ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.