ADVERTISEMENT

ಲಾಕ್‌ಡೌನ್‌ | ವಲಸೆ ಕಾರ್ಮಿಕರಿಗೆ ಆಹಾರ ಪೂರೈಸುತ್ತಿರುವ ಶಮಿ

ಪಿಟಿಐ
Published 2 ಜೂನ್ 2020, 19:30 IST
Last Updated 2 ಜೂನ್ 2020, 19:30 IST
ಮೊಹಮ್ಮದ್‌ ಶಮಿ 
ಮೊಹಮ್ಮದ್‌ ಶಮಿ    

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ಮಧ್ಯಮ ವೇಗದ ಬೌಲರ್‌ ಮೊಹಮ್ಮದ್‌ ಶಮಿ ಅವರು ವಲಸೆ ಕಾರ್ಮಿಕರಿಗೆ ಆಹಾರ, ನೀರು ಹಾಗೂ ಮುಖಗವಸು ನೀಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಲಾಕ್‌ಡೌನ್‌ನಿಂದಾಗಿ ತಮ್ಮ ಊರುಗಳತ್ತ ತೆರಳುತ್ತಿರುವ ಕಾರ್ಮಿಕರಿಗೆ ಆಹಾರದ ಪೊಟ್ಟಣಗಳನ್ನು ವಿತರಿಸುವ ಸಲುವಾಗಿಯೇ ಶಮಿ ಅವರುಉತ್ತರ ಪ್ರದೇಶದ ಶಹಾಸ್‌ಪುರದಲ್ಲಿರುವ ತಮ್ಮ ಮನೆಯ ಸಮೀಪ ಆಹಾರ ವಿತರಣಾ ಕೇಂದ್ರ ಸ್ಥಾಪಿಸಿದ್ದಾರೆ.

ಮುಖ ಮತ್ತು ಕೈಗವಸು ಧರಿಸಿರುವ ಶಮಿ, ಬಸ್‌ಗಳಲ್ಲಿ ತೆರಳುತ್ತಿರುವ ಕಾರ್ಮಿಕರಿಗೆ ಆಹಾರದ ಪೊಟ್ಟಣಗಳು ಹಾಗೂ ಮುಖಗವಸು ನೀಡುತ್ತಿರುವ ವಿಡಿಯೊವನ್ನು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯು (ಬಿಸಿಸಿಐ) ತನ್ನ ವೆಬ್‌ಸೈಟ್‌ನಲ್ಲಿ ಮಂಗಳವಾರ ಹಾಕಿದೆ.

ADVERTISEMENT

‘ಕೊರೊನಾ ವೈರಾಣುವಿನ ಉಪಟಳದಿಂದಾಗಿ ಇಡೀ ಜಗತ್ತೇ ತಲ್ಲಣಗೊಂಡಿದೆ. ಇಂತಹ ಸಂದಿಗ್ಧ ಸಮಯದಲ್ಲಿ ಮೊಹಮ್ಮದ್‌ ಶಮಿ ಅವರು ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 24ರ ಮೂಲಕ ತಮ್ಮ ಊರುಗಳಿಗೆ ಹೋಗುತ್ತಿರುವವರಿಗೆ ಆಹಾರ, ನೀರು ಮತ್ತು ಮುಖಗವಸು ವಿತರಿಸುವ ಮೂಲಕ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ’ ಎಂದು ಬಿಸಿಸಿಐ ಬರೆದುಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.