ADVERTISEMENT

ಕ್ರಿಕೆಟಿಗ ಮೊಹಮ್ಮದ್‌ ಶಮಿಗೆ ಜೀವ ಬೆದರಿಕೆ: ₹1 ಕೋಟಿಗೆ ಬೇಡಿಕೆ

ಪಿಟಿಐ
Published 6 ಮೇ 2025, 2:35 IST
Last Updated 6 ಮೇ 2025, 2:35 IST
ಮೊಹಮ್ಮದ್ ಶಮಿ
ಮೊಹಮ್ಮದ್ ಶಮಿ   

ಅಮ್ರೋಹಾ (ಉತ್ತರ ಪ್ರದೇಶ): ಭಾರತ ಕ್ರಿಕೆಟ್‌ ತಂಡದ ವೇಗಿ ಮೊಹಮ್ಮದ್‌ ಶಮಿ ಅವರಿಗೆ ಇ–ಮೇಲ್‌ ಮೂಲಕ ಜೀವ ಬೆದರಿಕೆ ಸಂದೇಶ ಬಂದಿದ್ದು, ₹1 ಕೋಟಿಗೆ ಬೇಡಿಕೆ ಇಟ್ಟಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರಜಪೂತ್ ಸಿಂಧರ್‌ ಎನ್ನುವ ಹೆಸರಿನ ವ್ಯಕ್ತಿಯಿಂದ ಇ–ಮೇಲ್‌ ಬಂದಿದೆ. ಮೊಹಮ್ಮದ್‌ ಶಮಿ ಮತ್ತು ಪ್ರಭಾಕರ ಎನ್ನುವಾತನನ್ನು ಕೊಲೆ ಮಾಡುವುದಾಗಿಯೂ, ₹1 ಕೋಟಿ ಹಣ ನೀಡಬೇಕೆಂದೂ ಸಂದೇಶ ಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. 

ADVERTISEMENT

ಬೆದರಿಕೆ ಸಂದೇಶದ ಕುರಿತು ಸ್ಥಳೀಯ ಪೊಲೀಸ್‌ ಅಧಿಕಾರಿಗಳು ದೃಢಪಡಿಸಿದ್ದು, ಆರೋಪಿಯ ಪತ್ತೆ ಕಾರ್ಯ ಆರಂಭವಾಗಿದೆ ಎಂದು ಅಮ್ರೋಹಾ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಶಮಿ ಮೂಲತಃ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಸಹಸಪುರ ಅಲಿನಗರ್‌ ಗ್ರಾಮದವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.