ADVERTISEMENT

IPL 2026: ಚೆನ್ನೈ ಸೂಪರ್‌ ಕಿಂಗ್ಸ್ ಪರ ಆಡಲು ಲಭ್ಯವಿರುವ ಧೋನಿ

ಪಿಟಿಐ
Published 22 ಫೆಬ್ರುವರಿ 2026, 21:04 IST
Last Updated 22 ಫೆಬ್ರುವರಿ 2026, 21:04 IST
ಮಹೇಂದ್ರ ಸಿಂಗ್‌ ಧೋನಿ
ಮಹೇಂದ್ರ ಸಿಂಗ್‌ ಧೋನಿ   

ಅಹಮದಾಬಾದ್‌ : ‘ಮಹೇಂದ್ರ ಸಿಂಗ್‌ ಧೋನಿ ಅವರು ಈ ಬಾರಿಯ ಐಪಿಎಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ (ಸಿಎಸ್‌ಕೆ) ತಂಡದ ಪರ ಆಡಲು ಲಭ್ಯವಿರುವುದಾಗಿ ತಿಳಿಸಿದ್ದಾರೆ. ಆದರೆ, ಅವರು ಎಲ್ಲ ಪಂದ್ಯಗಳಲ್ಲಿ ಕಣಕ್ಕಿಳಿಯುವರೇ ಎಂಬುದನ್ನು ಈಗಲೇ ಹೇಳಲಾಗದು’ ಎಂದು ಸಿಎಸ್‌ಕೆ ತಂಡದ ಮೂಲವೊಂದು ತಿಳಿಸಿದೆ.

ಈಚೆಗಷ್ಟೇ ತಂಡಕ್ಕೆ ಸೇರ್ಪಡೆಯಾಗಿರುವ ಸಂಜು ಸ್ಯಾಮ್ಸನ್‌ ಅವರು ತಂಡವನ್ನು ಮುನ್ನಡೆಸುವುದು ಬಹುತೇಕ ಖಚಿತವಾಗಿದೆ. ಹೀಗಾಗಿ, ಧೋನಿ ಅವರು ಈ ಬಾರಿ ನಾಯಕತ್ವ ವಹಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ.

ಧೋನಿ ಅವರು ಚೆನ್ನೈಗೆ ಆಗಮಿಸಲಿದ್ದಾರೆ. ಈ ಆವೃತ್ತಿಯಲ್ಲಿ ಆಡುವುದನ್ನು ಖಚಿತಪಡಿಸಿದ್ದಾರೆ ಎಂದು ಮೂಲವು ಹೇಳಿದೆ. 44 ವರ್ಷ ವಯಸ್ಸಿನ ವಿಕೆಟ್‌ ಕೀಪರ್‌–ಬ್ಯಾಟರ್‌ ಟೂರ್ನಿಯ ಎಲ್ಲ ಪಂದ್ಯಗಳಲ್ಲಿ ಆಡುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ADVERTISEMENT

ಧೋನಿ ಅವರು ತವರಿನಂಗಳದಲ್ಲಿ (ಚೆನ್ನೈನ ಚೆಪಾಕ್‌ ಕ್ರೀಡಾಂಗಣ) ನಿಗದಿಯಾಗಿರುವ ಎಲ್ಲ ಪಂದ್ಯಗಳಲ್ಲಿ ಆಡುವ ಸಾಧ್ಯತೆ ಇದೆ. ಆದರೆ, ಹೊರಗಿನ ಪಂದ್ಯಗಳಲ್ಲಿ ಕಣಕ್ಕಿಳಿಯುವುದು ಅನುಮಾನ ಎಂದು ಹೇಳಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.