ADVERTISEMENT

ಐಪಿಎಲ್ ನಂತರ ಭವಿಷ್ಯ ನಿರ್ಧಾರಿಸುವರೇ ಧೋನಿ?

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2019, 2:06 IST
Last Updated 27 ನವೆಂಬರ್ 2019, 2:06 IST
   

ನವದೆಹಲಿ (ಪಿಟಿಐ): ಭಾರತ ತಂಡದ ಆಟಗಾರ ಮಹೇಂದ್ರಸಿಂಗ್ ಧೋನಿ ಅವರು ತಮ್ಮ ನಿವೃತ್ತಿಯ ನಿರ್ಧಾರವನ್ನು ಮುಂದಿನ ಐಪಿಎಲ್ ಟ್ವೆಂಟಿ–20 ಕ್ರಿಕೆಟ್ ಟೂರ್ನಿಯ ನಂತರ ತೆಗೆದುಕೊಳ್ಳಲಿದ್ಧಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಇಂಗ್ಲೆಂಡ್‌ನಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯ ನಂತರ ಭಾರತ ತಂಡವು ಆಡಿದ ಯಾವುದೇ ಸರಣಿಯಲ್ಲಿಯೂ ಧೋನಿ ಆಡಿಲ್ಲ. ಆದ್ದರಿಂದ ಅವರು ನಿಗದಿಯ ಓವರ್‌ಗಳ ಕ್ರಿಕೆಟ್‌ನಿಂದ ನಿವೃತ್ತರಾಗುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

‘ವದಂತಿಗಳನ್ನು ನಿಯಂತ್ರಿಸಲು ಯಾರಿಂದಲೂ ಸಾಧ್ಯವಿಲ್ಲ. ಧೋನಿ ಶ್ರೇಷ್ಠ ಆಟಗಾರನಾಗಿದ್ದಾರೆ. ಆದ್ದರಿಂದ ಅವರ ಕುರಿತು ಮಾತುಗಳು ಹರಿದಾಡುವುದು ಸಹಜ’ ಎಂದು ಮೂಲಗಳು ಹೇಳಿವೆ.

ADVERTISEMENT

ಧೋನಿ ಈಚೆಗೆ ರಾಂಚಿಯಲ್ಲಿ ಜಾರ್ಖಂಡ್‌ನ 23 ವರ್ಷದೊಳಗಿನವರ ತಂಡಕ್ಕೆ ಮಾರ್ಗದರ್ಶನ ನೀಡಿದ್ದರು. ನೆಟ್ಸ್‌ನಲ್ಲಿ ಕಾಣಿಸಿಕೊಂಡಿದ್ದ ಅವರು ಮತ್ತೆ ಕ್ರಿಕೆಟ್‌ಗೆ ಮರಳುತ್ತಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಬರೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.