ರಾಂಚಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ತಂದೆ–ತಾಯಿಗೆ ಕೋವಿಡ್ ದೃಢಪಟ್ಟಿದೆ.
ಧೋನಿ ಅವರ ತಂದೆ ಮತ್ತು ತಾಯಿಗೆ ಕೋವಿಡ್ ದೃಢಪಟ್ಟಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆಮ್ಲಜನಕದ ಮಟ್ಟ ಸ್ಥಿರವಾಗಿದೆ ಎಂದು ಜಾರ್ಖಂಡ್‌ನ ರಾಂಚಿಯ ಪಲ್ಸ್ ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆಯ ಹೇಳಿಕೆ ಉಲ್ಲೇಖಿಸಿ ‘ಎಎನ್‌ಐ’ ಟ್ವೀಟ್ ಮಾಡಿದೆ.
ಧೋನಿ ಅವರು ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಆಡುತ್ತಿದ್ದು ತಂಡದ ಜತೆಗಿದ್ದಾರೆ.
ಧೋನಿ ನಾಯಕತ್ವದಸಿಎಸ್‌ಕೆ ತಂಡವು ಇಂದುಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧಪಂದ್ಯವನ್ನಾಡಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.