ADVERTISEMENT

ಕ್ರಿಕೆಟಿಗ ರಾಹುಲ್, ಅಥಿಯಾ ಶೆಟ್ಟಿ ದಂಪತಿಗೆ ಹೆಣ್ಣು ಮಗು ಜನನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಮಾರ್ಚ್ 2025, 16:25 IST
Last Updated 24 ಮಾರ್ಚ್ 2025, 16:25 IST
<div class="paragraphs"><p>ಕ್ರಿಕೆಟಿಗ ರಾಹುಲ್, ಅಥಿಯಾ ಶೆಟ್ಟಿ</p></div>

ಕ್ರಿಕೆಟಿಗ ರಾಹುಲ್, ಅಥಿಯಾ ಶೆಟ್ಟಿ

   

ಮುಂಬೈ: ಕ್ರಿಕೆಟಿಗ ಕೆ.ಎಲ್.ರಾಹುಲ್ ಹಾಗೂ ಬಾಲಿವುಡ್ ನಟಿ ಅಥಿಯಾ ಶೆಟ್ಟಿ ದಂಪತಿಗೆ ಹೆಣ್ಣು ಮಗು ಜನಿಸಿದೆ.

ಈ ಕುರಿತು ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ADVERTISEMENT

ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದ ಈ ಜೋಡಿ 2023ರ ಜನವರಿ 23ರಂದು ದಾಂಪತ್ಯ ಜೀವನಕ್ಕೆ ಕಾಲಿಟಿದ್ದರು.

ಕಳೆದ ನವೆಂಬರ್‌ನಲ್ಲಿ ತಾಯಿಯಾಗುತ್ತಿರುವ ಸಂತಸದ ವಿಷಯವನ್ನು ಅಥಿಯಾ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. 'Our beautiful blessing coming soon 2025' ಎಂದು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದರು.

ಮಗುವಿನ ನಿರೀಕ್ಷೆಯಲ್ಲಿದ್ದ ಕಾರಣಕ್ಕಾಗಿ ಇಂದು (ಸೋಮವಾರ) ಲಖನೌ ಸೂಪರ್ ಜೈಂಟ್ ವಿರುದ್ಧ ನಡೆದ ಐಪಿಎಲ್ ಪಂದ್ಯವನ್ನು ರಾಹುಲ್ ತಪ್ಪಿಸಿಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.