ಮುಂಬೈ: ಸೆಲ್ಫಿ ತೆಗೆಯಲು ನಿರಾಕರಿಸಿದ್ದಕ್ಕೆ ಕ್ರಿಕೆಟಿಗ ಪೃಥಿ ಶಾ ಕಾರಿನ ಮೇಲೆ ದಾಳಿ ಮಾಡಿರುವ ಘಟನೆ ವರದಿಯಾಗಿದೆ.
ಮುಂಬೈನ ಸಾಂತಾಕ್ರೂಜ್‌ನಲ್ಲಿರುವ ಐಷಾರಾಮಿ ಹೋಟೆಲ್ ಹೊರಗಡೆ ಸೆಲ್ಫಿ ತೆಗೆಯುವುದಕ್ಕೆ ಸಂಬಂಧಿಸಿದಂತೆ ಜಗಳ ನಡೆದಿದೆ.
ಗಲಭೆ ಹಾಗೂ ಸುಲಿಗೆ ಪ್ರಕರಣದಲ್ಲಿ ಮಹಿಳೆ ಸೇರಿದಂತೆ ಎಂಟು ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಪೃಥ್ವಿ ಶಾ ಅವರ ಕಾರಿನ ಮೇಲೆ ಬೇಸ್‌ಬಾಲ್ ಬ್ಯಾಟ್‌ನಿಂದ ದಾಳಿ ನಡೆಸಿದ ಆರೋಪಿ ಗಾಜು ಪುಡಿ ಮಾಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣ ಇತ್ಯರ್ಥಕ್ಕೆ ₹50 ಸಾವಿರ ನೀಡುವಂತೆಯೂ ಮತ್ತು ನಕಲಿ ಪ್ರಕರಣದ ಬೆದರಿಕೆ ಹಾಕಲಾಗಿದೆ ಎಂದು ಹೇಳಲಾಗಿದೆ.
ಪೃಥ್ವಿ ಶಾ ನಾಯಕತ್ವದಲ್ಲಿ ಭಾರತ ತಂಡವು 2018ರಲ್ಲಿ 19 ವರ್ಷದವರೊಳಗಿನ ವಿಶ್ವಕಪ್ ಜಯಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.