ಮುಲ್ಲನಪುರ: ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ ₹ 12 ಲಕ್ಷ ದಂಡ ವಿಧಿಸಲಾಗಿದೆ.
ಗುರುವಾರ ಇಲ್ಲಿ ಪಂಜಾಬ್ ಕಿಂಗ್ಸ್ ಎದುರು ನಡೆದ ಪಂದ್ಯದಲ್ಲಿ ನಿಗದಿಯ ಅವಧಿಯಲ್ಲಿ ಓವರ್‌ಗಳನ್ನು ಸಂಪೂರ್ಣಗೊಳಿಸದ ಕಾರಣಕ್ಕೆ ಈ ದಂಡ ವಿಧಿಸಲಾಗಿದೆ. ಮುಂಬೈ ತಂಡವು ಮೊದಲ ಸಲ ನಿಯಮ ಉಲ್ಲಂಘಿಸಿದೆ. ಆದ್ದರಿಂದ ನಾಯಕ ಪಾಂಡ್ಯ ಅವರಿಗೆ ದಂಡ ಹಾಕಲಾಗಿದೆ ಎಂದು ಐಪಿಎಲ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.