ADVERTISEMENT

ರಾಷ್ಟ್ರೀಯ ಸೀನಿಯರ್‌ ಮಹಿಳಾ ಏಕದಿನ ಟೂರ್ನಿ: 4ಕ್ಕೆ ಟ್ರಯಲ್ಸ್‌

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2025, 16:21 IST
Last Updated 31 ಡಿಸೆಂಬರ್ 2025, 16:21 IST
   

ಬೆಂಗಳೂರು: ರಾಷ್ಟ್ರೀಯ ಸೀನಿಯರ್‌ ಮಹಿಳಾ ಏಕದಿನ ಟೂರ್ನಿಗಳಿಗೆ ರಾಜ್ಯ ತಂಡವನ್ನು ಆಯ್ಕೆ ಮಾಡಲು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯು ಜನವರಿ ಎರಡು ಅಥವಾ ಮೂರನೇ ವಾರದಲ್ಲಿ ಆಯ್ಕೆ ಪಂದ್ಯಗಳನ್ನು ಆಯೋಜಿಸಲಿದೆ. ಈ ಪಂದ್ಯಗಳಲ್ಲಿ ಆಡಲಿರುವ ಆಟಗಾರ್ತಿಯರ ಆಯ್ಕೆಗಾಗಿ ಕೆಎಸ್‌ಸಿಎ ಇದೇ ಭಾನುವಾರ (ಜ.4) ಆಯ್ಕೆ ಟ್ರಯಲ್ಸ್‌ ಆಯೋಜಿಸಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಆವರಣದಲ್ಲಿರುವ ಕೆಎಸ್‌ಸಿಎ–ಬಿ ಮೈದಾನದಲ್ಲಿ ಅಂದು ಬೆಳಿಗ್ಗೆ 9ಕ್ಕೆ ಟ್ರಯಲ್ಸ್‌ ಆರಂಭವಾಗಲಿದೆ. 2009 ಆಗಸ್ಟ್‌ 31ರ ಮೊದಲು ಜನಿಸಿದ ಆಟಗಾರ್ತಿಯರು ಮಾತ್ರ ಈ ಟ್ರಯಲ್ಸ್‌ನಲ್ಲಿ ಭಾಗವಹಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT