ಚಿತ್ರ ಕೃಪೆ: @ICCAsiaCricket
ದುಬೈ: ಪೂರ್ವ ಏಷ್ಯಾ ಪೆಸಿಫಿಕ್ ಅರ್ಹತಾ ಸುತ್ತಿನಲ್ಲಿ ಅಗ್ರ ಮೂರು ಸ್ಥಾನಗಳನ್ನು ಖಚಿತಪಡಿಸಿಕೊಂಡ ನೇಪಾಳ ಮತ್ತು ಒಮಾನ್ ತಂಡಗಳು ಸೂಪರ್ ಸಿಕ್ಸ್ ಪಂದ್ಯಕ್ಕೂ ಮೊದಲೇ ಮುಂದಿನ ವರ್ಷ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್‌ಗೆ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿವೆ.
ಯುಎಇ ತಂಡ ಸಮೋವಾವನ್ನು ಸೋಲಿಸಿದ್ದು, ಗುರುವಾರ (ಅಕ್ಟೋಬರ್ 16) ಜಪಾನ್ ತಂಡವನ್ನು ಎದುರಿಸಲಿದೆ. ಈ ನಡುವೆ ಒಮಾನ್ ಮತ್ತು ನೇಪಾಳ ತಂಡಗಳು ಸೂಪರ್ ಸಿಕ್ಸ್ ಪಂದ್ಯದ ಫಲಿತಾಂಶ ಏನೇ ಬಂದರು 2026ರ ಟಿ20 ವಿಶ್ವಕಪ್ ಟೂರ್ನಿಗೆ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿವೆ.
ಸೂಪರ್ ಸಿಕ್ಸ್ ಹಂತದ ಮೊದಲ ಆರು ಪಂದ್ಯಗಳಲ್ಲಿ ಐದು ಪಂದ್ಯಗಳ ಫಲಿತಾಂಶ ಕೊನೆಯ ಓವರ್‌ವರೆಗೆ ಹೋಯಿತು. ಆದರೂ, ನೇಪಾಳ ಎರಡು ಪ್ರಮುಖ ಪಂದ್ಯಗಳನ್ನು ಗೆಲ್ಲುವ ಮೂಲಕ ವಿಶ್ವಕಪ್‌ಗೆ ಅರ್ಹತೆ ಪಡೆದುಕೊಂಡಿತು.
ಓಮನ್ ಕೂಡ ಕತಾರ್ ವಿರುದ್ಧ ಜಯ ಸಾಧಿಸುವ ಮೂಲಕ ಭಾರತ ಹಾಗೂ ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ತನ್ನ ಸ್ಥಾನ ಭದ್ರಪಡಿಸಿಕೊಂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.