ADVERTISEMENT

RCB vs MI: ಪಂದ್ಯ ವೀಕ್ಷಿಸಿದ ನ್ಯೂಜಿಲೆಂಡ್ ಉಪ ಪ್ರಧಾನಿ ವಿನ್ಸ್ಟನ್ ಪೀಟರ್ಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಮಾರ್ಚ್ 2024, 2:15 IST
Last Updated 13 ಮಾರ್ಚ್ 2024, 2:15 IST
<div class="paragraphs"><p>ನ್ಯೂಜಿಲೆಂಡ್ ಉಪ ಪ್ರಧಾನಿ ವಿನ್ಸ್ಟನ್ ಪೀಟರ್ಸ್ ಅವರು ಕ್ರಿಕೆಟ್ ಪಂದ್ಯ ವೀಕ್ಷಿಸಿದರು.</p></div>

ನ್ಯೂಜಿಲೆಂಡ್ ಉಪ ಪ್ರಧಾನಿ ವಿನ್ಸ್ಟನ್ ಪೀಟರ್ಸ್ ಅವರು ಕ್ರಿಕೆಟ್ ಪಂದ್ಯ ವೀಕ್ಷಿಸಿದರು.

   

–ಟ್ವಿಟರ್ ಚಿತ್ರ

ನವದೆಹಲಿ: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಎದುರು 7 ವಿಕೆಟ್‌ಗಳಿಂದ ಗೆಲುವು ಸಾಧಿಸಿದೆ.

ADVERTISEMENT

ನ್ಯೂಜಿಲೆಂಡ್ ಉಪ ಪ್ರಧಾನಿ ವಿನ್ಸ್ಟನ್ ಪೀಟರ್ಸ್ ಸೇರಿದಂತೆ ರಿಲಯನ್ಸ್ ಫೌಂಡೇಶನ್ ಅಧ್ಯಕ್ಷೆ ನೀತಾ ಮುಖೇಶ್ ಅಂಬಾನಿ ಅವರು ಈ ಪಂದ್ಯವನ್ನು ವೀಕ್ಷಿಸುವ ಮೂಲಕ ಗಮನ ಸೆಳೆದಿದ್ದಾರೆ.

‘ಭಾರತವು ನಮಗೆ ಬಹಳ ಮುಖ್ಯವಾದ ರಾಷ್ಟ್ರವಾಗಿದೆ. ಭಾರತಕ್ಕೆ ಭೇಟಿ ನೀಡಿರುವುದು ಬಹಳ ಮುಖ್ಯ ಮತ್ತು ಆಸಕ್ತಿದಾಯಕವಾಗಿದೆ. ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಅವರೊಂದಿಗೆ ಸಭೆ ನಡೆಸಿದ್ದು, ಹಲವು ವಿಷಯ ಬಗ್ಗೆ ಚರ್ಚೆ ನಡೆಸಿದ್ದೇವೆ. ಇದೇ ಸಂದರ್ಭದಲ್ಲಿ ಮಹಿಳಾ ಕ್ರಿಕೆಟ್ ಎಷ್ಟು ಜನಪ್ರಿಯವಾಗಿದೆ ಎಂಬುದನ್ನು ನೋಡಲು ತುಂಬಾ ರೋಮಾಂಚನಕಾರಿಯಾಗಿದೆ’ ಎಂದು ವಿನ್ಸ್ಟನ್ ಪೀಟರ್ಸ್ ತಿಳಿಸಿದ್ದಾರೆ.

ಈ ಪಂದ್ಯದಲ್ಲಿ ಆಸ್ಟ್ರೇಲಿಯನ್ ಆಲ್‌ರೌಂಡರ್ ಎಲಿಸ್ ಪೆರಿ (4–0–15–6 ಹಾಗೂ ಔಟಾಗದೆ 40) ಅವರ ಆಲ್‌ರೌಂಡ್ ಆಟದಿಂದಾಗಿ ಆರ್‌ಸಿಬಿ ತಂಡವು ಮುಂಬೈ ಎದುರು ಜಯ ಸಾಧಿಸಿದೆ. ಇದರೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿತು ಮತ್ತು ಪ್ಲೇ ಆಫ್ ಹಂತ ತಲುಪಿತು.

ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು ಆರ್‌ಸಿಬಿ ಬೌಲಿಂಗ್ ದಾಳಿಗೆ ತತ್ತರಿಸಿ 19 ಓವರ್‌ಗಳಲ್ಲಿ 113 ರನ್‌ಗಳಿಗೆ ಆಲೌಟ್ ಆಯಿತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 15 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು ಗುರಿ ಮುಟ್ಟಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.