ನ್ಯೂಜಿಲೆಂಡ್ ಆಟಗಾರರು
ರಾಯಿಟರ್ಸ್ ಚಿತ್ರ
ದುಬೈ: ನ್ಯೂಜಿಲೆಂಡ್ ತಂಡದ ಪ್ರಮುಖ ವೇಗಿ ಮ್ಯಾಟ್ ಹೆನ್ರಿ ಅವರು ಗಾಯಗೊಂಡಿದ್ದು, ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನವಾಗಿದೆ.
ಫೈನಲ್ ಪಂದ್ಯವು ಮಾರ್ಚ್ 9ರಂದು (ಭಾನುವಾರ) ದುಬೈ ಕ್ರೀಡಾಂಗಣದಲ್ಲಿ ನಡೆಯಲಿದೆ. ಸತತ ಮೂರನೇ ಬಾರಿಗೆ ಅಂತಿಮ ಹಂತ ತಲುಪಿರುವ ಭಾರತ ಮತ್ತು ನ್ಯೂಜಿಲೆಂಡ್ ಪ್ರಶಸ್ತಿಗಾಗಿ ಸೆಣಸಲಿವೆ.
ಗುಂಪು ಹಂತದ ಪಂದ್ಯದಲ್ಲಿ ಭಾರತ ಎದುರು 42 ರನ್ ನೀಡಿ ಐದು ವಿಕೆಟ್ ಕಬಳಿಸಿದ್ದ ಹೆನ್ರಿ, ಟೂರ್ನಿಯಲ್ಲಿ ಒಟ್ಟು 10 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಆ ಮೂಲಕ ಹೆಚ್ಚು ವಿಕೆಟ್ ಗಳಿಸಿದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
ದಕ್ಷಿಣ ಆಫ್ರಿಕಾ ಎದುರು ಲಾಹೋರ್‌ನಲ್ಲಿ ಬುಧವಾರ ನಡೆದ ಸೆಮಿಫೈನಲ್‌ನಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಹೆನ್ರಿ ಅವರ ಭುಜಕ್ಕೆ ಪೆಟ್ಟಾಗಿದೆ. ಇದರಿಂದಾಗಿ, 'ಬ್ಲಾಕ್ ಕ್ಯಾಪ್ಸ್' ಬಳಗಕ್ಕೆ ಹಿನ್ನಡೆಯಾಗಿದೆ. ಆದರೆ, ಮ್ಯಾಟ್ ಹೆನ್ರಿ ಕಣಕ್ಕಿಳಿಯಲಿದ್ದಾರೆ ಎಂದು ಆ ತಂಡದ ಕೋಚ್ ಗ್ಯಾರಿ ಸ್ಟೀಡ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.