ADVERTISEMENT

NZ v IND 1ST ODI: ಭಾರತದ ವಿರುದ್ಧ ಟಾಸ್‌ ಗೆದ್ದ ನ್ಯೂಜಿಲೆಂಡ್, ಬೌಲಿಂಗ್ ಆಯ್ಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ನವೆಂಬರ್ 2022, 1:40 IST
Last Updated 25 ನವೆಂಬರ್ 2022, 1:40 IST
   

ಆಕ್ಲೆಂಡ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯ ಇಂದು ನಡೆಯುತ್ತಿದ್ದು, ಟಾಸ್‌ ಗೆದ್ದ ನ್ಯೂಜಿಲೆಂಡ್‌, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಶಿಖರ್ ಧವನ್ ತಂಡ ಮುನ್ನಡೆಸುತ್ತಿದ್ದಾರೆ. ಅನುಭವಿ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಹಾಗೂ ಕೆ.ಎಲ್. ರಾಹುಲ್ ಸೇರಿದಂತೆ ಅನುಭವಿಗಳು ವಿಶ್ರಾಂತಿ ಪಡೆದಿದ್ದಾರೆ.

ಮುಂದಿನ ವರ್ಷ ಭಾರತದಲ್ಲಿಯೇ ನಡೆಯಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ಭಾರತ ತಂಡ ಕಟ್ಟುವ ಪ್ರಯೋಗ ನ್ಯೂಜಿಲೆಂಡ್‌ ಅಂಗಳದಿಂದ ಆರಂಭವಾಗಿದೆ.

ADVERTISEMENT

ಶಿಖರ್ ಕಳೆದ ಎರಡು ವರ್ಷಗಳಲ್ಲಿ ಏಕದಿನ ಕ್ರಿಕೆಟ್‌ನಲ್ಲಿ 1000 ರನ್‌ಗಳನ್ನು ಗಳಿಸಿದ್ದಾರೆ. ಅವರನ್ನು ಈ ಮಾದರಿಗೆ ಮಾತ್ರ ಆಯ್ಕೆ ಮಾಡಲಾಗುತ್ತಿದೆ. ಟಿ20 ಹಾಗೂ ಟೆಸ್ಟ್‌ಗಳಿಗೆ ಪರಿಗಣಿಸಿಲ್ಲ. ಸೂರ್ಯಕುಮಾರ್ ಯಾದವ್ ಟಿ20 ಮಾದರಿಯಿಂದ 50 ಓವರ್‌ಗಳ ಮಾದರಿಯಲ್ಲಿಯೂ ತಮ್ಮ ಅಬ್ಬರದ ಆಟವನ್ನು ಮುಂದುವರಿಸುವ ಹುಮ್ಮಸ್ಸಿನಲ್ಲಿದ್ದಾರೆ.

ಕೇನ್ ವಿಲಿಯಮ್ಸನ್ ನಾಯಕತ್ವದ ಆತಿಥೇಯ ಬಳಗವು ಟಿ20 ಸರಣಿಯಲ್ಲಿ ಆಡಿದ್ದ ತಂಡವನ್ನೇ ಉಳಿಸಿಕೊಂಡಿದೆ. ತವರಿನಲ್ಲಿಯೇ ಚುಟುಕು ಸರಣಿಯನ್ನು ಸೋತಿರುವ ಹತಾಶೆಯಲ್ಲಿರುವ ಕಿವೀಸ್ ಬಳಗವು ಮುಯ್ಯಿ ತೀರಿಸಿಕೊಳ್ಳಲು ಸಿದ್ಧವಾಗಿದೆ.

ತಂಡಗಳು: ಭಾರತ: ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್‌ಕೀಪರ್), ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಉಮ್ರಾನ್ ಮಲಿಕ್, ಆರ್ಷದೀಪ್ ಸಿಂಗ್, ಯಜುವೇಂದ್ರ ಚಾಹಲ್

ನ್ಯೂಜಿಲೆಂಡ್: ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಡೆವೊನ್ ಕಾನ್ವೆ, ಟಾಮ್ ಲಥಾಮ್, ಡೆರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಆ್ಯಡಂ ಮಿಲ್ನೆ, ಟಿಮ್ ಸೌಥಿ, ಮ್ಯಾಟ್ ಹೆನ್ರಿ, ಲಾಕಿ ಫರ್ಗ್ಯುಸನ್, ಮಿಚೆಲ್ ಸ್ಯಾಂಟನರ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.