ಆಕ್ಲೆಂಡ್: ನ್ಯೂಜಿಲೆಂಡ್ ಮಹಿಳಾ ತಂಡದ ನಾಯಕಿ ಸೋಫಿ ಡಿವೈನ್ ಅವರು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ ಬಳಿಕ ಏಕದಿನ ಕ್ರಿಕೆಟ್‌ಗೆ ವಿದಾಯ ಘೋಷಿಸುವುದಾಗಿ ಹೇಳಿದ್ದಾರೆ. ಈ ವಿಶ್ವಕಪ್ ಭಾರತದಲ್ಲಿ ಸೆ. 30 ರಿಂದ ನ. 2ರವರೆಗೆ ನಡೆಯಲಿದೆ.
35 ವರ್ಷ ವಯಸ್ಸಿನ ಆಲ್‌ರೌಂಡರ್ ಸೋಫಿ ಅವರು 152 ಅಂತರರಾಷ್ಟ್ರೀಯ ಏಕದಿನ ಪಂದ್ಯಗಳನ್ನಾಡಿದ್ದು, 3,990 ರನ್ ಗಳಿಸಿದ್ದಾರೆ. ಇದರಲ್ಲಿ ಎಂಟು ಶತಕಗಳೂ ಸೇರಿವೆ. ಬೌಲಿಂಗ್‌ನಲ್ಲಿ 35.72ರ ಸರಾಸರಿಯಲ್ಲಿ 107 ವಿಕೆಟ್ ಪಡೆದಿದ್ದಾರೆ.
2024ರ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಚಾಂಪಿಯನ್ ಆಗಿತ್ತು.
ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಸೋಫಿ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.