ನವದೆಹಲಿ: ಚಿನ್ನಸ್ವಾಮಿ ಕ್ರೀಡಾಂಗಣದ ನಿರ್ವಹಣೆಗೆ ನೀರು ಹಾಯಿಸಲು ಶುದ್ಧ ನೀರನ್ನು ಬಳಸುತ್ತಿರುವುದರ ಕುರಿತು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ (ಎನ್‌ಜಿಟಿ) ಅಸಮಾಧಾನ ವ್ಯಕ್ತಪಡಿಸಿದೆ.
ಕ್ರೀಡಾಂಗಣಕ್ಕೆ ಸಂಸ್ಕರಿತ ನೀರು ಬಳಕೆಯಾಗುತ್ತಿದೆಯೇ ಎಂದು ಈ ಹಿಂದೆ, ಏಪ್ರಿಲ್‌ನಲ್ಲಿ ಎನ್‌ಜಿಟಿಯು ರಾಜ್ಯ ಕ್ರಿಕೆಟ್ ಸಂಸ್ಥೆಯಿಂದ ವಿವರಣೆ ಕೇಳಿತ್ತು.
ಕ್ರೀಡಾಂಗಣಕ್ಕೆ ಬೇರೆ ಬೇರೆ ಮೂಲಗಳಿಂದ ನೀರು ಪಡೆಯಲಾಗುತ್ತಿದೆ ಎಂದು ಕ್ರಿಕೆಟ್ ಸಂಸ್ಥೆ ತನ್ನ ಪ್ರತಿಕ್ರಿಯೆಯಲ್ಲಿ ತಿಳಿಸಿದೆ ಎಂದು ನವೆಂಬರ್ 26ರಂದು ಎನ್‌ಜಿಟಿ ಅಧ್ಯಕ್ಷ ನ್ಯಾ.ಪ್ರಕಾಶ್ ಶ್ರೀವಾಸ್ತವ ಆದೇಶದಲ್ಲಿ ತಿಳಿಸಿದ್ದಾರೆ. ಐಪಿಎಲ್ ಪಂದ್ಯಗಳ ವೇಳೆ ಕ್ರೀಡಾಂಗಣಕ್ಕೆ 75,000 ಲೀಟರ್ ನೀರು ಬಳಕೆಯಾಗುತ್ತಿದೆ.
ಬೆಂಗಳೂರಿನಲ್ಲಿ ನಿತ್ಯ 500 ದಶಲಕ್ಷ ಲೀಟರ್ ನೀರಿನ ಕೊರತೆಯಿದೆ ಎಂದು ಜಲತಜ್ಞರು ಅಂದಾಜಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.