ADVERTISEMENT

‘ಸಲಹಾ ಸಮಿತಿಯಲ್ಲಿ ಬದಲಾವಣೆ ಇಲ್ಲ’

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2018, 13:25 IST
Last Updated 21 ಆಗಸ್ಟ್ 2018, 13:25 IST

ನವದೆಹಲಿ (ಪಿಟಿಐ): ‘ಕ್ರಿಕೆಟ್‌ ಸಲಹಾ ಸಮಿತಿ (ಸಿಎಸಿ)ಯಲ್ಲಿ ಯಾವುದೇ ಬದಲಾವಣೆ ಇಲ್ಲ. ಭಾರತದ ಹಿರಿಯ ಕ್ರಿಕೆಟಿಗರಾದ ಸಚಿನ್‌ ತೆಂಡೂಲ್ಕರ್‌, ಸೌರವ್‌ ಗಂಗೂಲಿ ಹಾಗೂ ವಿವಿಎಸ್‌ ಲಕ್ಷ್ಮಣ್‌ ಅವರು ಈ ಸಮಿತಿಯ ಸದಸ್ಯರಾಗಿ ಮುಂದುವರಿಯಲಿದ್ದಾರೆ’ ಎಂದು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯ (ಬಿಸಿಸಿಐ) ಆಡಳಿತಾಧಿಕಾರಿಗಳ ಸಮಿತಿಯ (ಸಿಒಎ) ಮುಖ್ಯಸ್ಥ ವಿನೋದ್‌ ರಾಯ್‌ ಸೋಮವಾರ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.