ADVERTISEMENT

ಐಪಿಎಲ್‌: ಶನಿವಾರ ಒಂದೇ ಪಂದ್ಯ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2020, 23:03 IST
Last Updated 17 ಫೆಬ್ರುವರಿ 2020, 23:03 IST
ಮುಂಬೈ ಇಂಡಿಯನ್ಸ್‌ನ ರೋಹಿತ್ ಶರ್ಮಾ –ಎಎಫ್‌ಪಿ ಚಿತ್ರ
ಮುಂಬೈ ಇಂಡಿಯನ್ಸ್‌ನ ರೋಹಿತ್ ಶರ್ಮಾ –ಎಎಫ್‌ಪಿ ಚಿತ್ರ   
""

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯಲ್ಲಿ ಈ ಬಾರಿ ಶನಿವಾರ ಒಂದೇ ಪಂದ್ಯ ಇರುತ್ತದೆ. ಭಾನುವಾರ ಮಾತ್ರ ಎರಡು ಪಂದ್ಯಗಳು ನಡೆಯಲಿವೆ.

ಕಳೆದ ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್ ಮತ್ತು ರನ್ನರ್ ಅಪ್ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮೊದಲ ಪಂದ್ಯದಲ್ಲಿ ಸೆಣಸಲಿವೆ. ಈ ಪಂದ್ಯ ಮಾರ್ಚ್ 29ರ ಭಾನುವಾರ ಮುಂಬೈಯ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ.

ಟೂರ್ನಿಯ ಲೀಗ್ ಪಂದ್ಯಗಳ ವೇಳಾಪಟ್ಟಿಯನ್ನಷ್ಟೇ ಐಪಿಎಲ್ ಆಡಳಿತ ಬಿಡುಗಡೆ ಮಾಡಿದೆ. ಆದರೆ ಫೈನಲ್ ಪಂದ್ಯ ಮೇ 24ರಂದು ನಡೆಯುವುದು ಖಚಿತವಾಗಿದೆ. ಕಳೆದ ಬಾರಿ ಮೇ 12ರಂದು ಹೈದರಾಬಾದ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಸಿಎಸ್‌ಕೆ ವಿರುದ್ಧ ಮುಂಬೈ ಇಂಡಿಯನ್ಸ್ಒಂದು ರನ್‌ ಅಂತರದ ಗೆಲುವು ದಾಖಲಿಸಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.