ADVERTISEMENT

ಆರ್‌ಸಿಬಿ ವಿಜಯೋತ್ಸವ ಮೆರವಣಿಗೆ ಇಲ್ಲ: ಕ್ರೀಡಾಂಗಣದಲ್ಲಿ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 4 ಜೂನ್ 2025, 8:26 IST
Last Updated 4 ಜೂನ್ 2025, 8:26 IST
<div class="paragraphs"><p>ಕಪ್‌ ಗೆದ್ದ ಖುಷಿಯಲ್ಲಿ ಆರ್‌ಸಿಬಿ ಆಟಗಾರರ ಸಂಭ್ರಮ</p></div>

ಕಪ್‌ ಗೆದ್ದ ಖುಷಿಯಲ್ಲಿ ಆರ್‌ಸಿಬಿ ಆಟಗಾರರ ಸಂಭ್ರಮ

   

ಪಿಟಿಐ ಚಿತ್ರ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡಕ್ಕೆ ಇಂದು ಸಂಜೆ 5ರಿಂದ 6ರ ವರೆಗೆ ಸನ್ಮಾನ ಸಮಾರಂಭ ಇರುವುದರಿಂದ ಮಧ್ಯಾಹ್ನ 3ರಿಂದ ರಾತ್ರಿ 8ರ ವರೆಗೆ ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳನ್ನು ಬಳಸದಂತೆ ಸಂಚಾರ ಪೊಲೀಸರು ಸಲಹೆ ನೀಡಿದ್ದಾರೆ.

ADVERTISEMENT

ವಿಧಾನಸೌಧ ಬಳಿಯಿಂದ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಟಗಾರರು ಬಸ್‌ನಲ್ಲಿ ತೆರಳಲಿದ್ದಾರೆ. ಭದ್ರತಾ ದೃಷ್ಟಿಯಿಂದ ವಿಜಯೋತ್ಸವ ಮೆರವಣಿಗೆ ಇರುವುದಿಲ್ಲ, ಸೀಮಿತ ಪಾರ್ಕಿಂಗ್ ವ್ಯವಸ್ಥೆ ಇರುವುದರಿಂದ ಸಾರ್ವಜನಿಕರು ಮೆಟ್ರೊ ಇತರೆ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸೂಚನೆ ನೀಡಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಪಾಸ್ ಹಾಗೂ ಟಿಕೆಟ್ ಹೊಂದಿದ್ದವರಿಗೆ ಮಾತ್ರ ಅವಕಾಶ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಧಿಕೃತ ಟಿಕೇಟ್, ಪಾಸ್ ಹೊಂದಿದವರಿಗೆ ಮಾತ್ರ ಪ್ರವೇಶ

ಚಿನ್ನಸ್ವಾಮಿ ಕ್ರೀಡಾಂಗಣದ ಒಳಗೆ ತೆರಳಲು ಅಧಿಕೃತ ಟಿಕೇಟ್, ಪಾಸ್ ಹೊಂದಿದವರಿಗೆ ಮಾತ್ರ ಪ್ರವೇಶವಿರುತ್ತದೆ ಎಂದು ಬೆಂಗಳೂರು ಪೊಲೀಸ್‌ ಆಯುಕ್ತರ ಕಚೇರಿ ಪ್ರಕಟಣೆ ಹೊರಡಿಸಿದೆ.

‘ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೇಟ್ ತಂಡವು 2025 ನೇ ಸಾಲಿನ ಐ.ಪಿ.ಎಲ್ ಟ್ರೋಫಿಯನ್ನು ಜಯಗಳಿಸಿ, ಟೊಫಿಯೊಂದಿಗೆ ಇಂದು  ಬೆಂಗಳೂರಿಗೆ ಆಗಮಿಸುತ್ತಿದ್ದು, ಈ ಹಿನ್ನಲೆಯಲ್ಲಿ ಕೆ.ಎಸ್.ಸಿ.ಎ. ವತಿಯಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ದಿನ ಸಂಜೆ 05-00 ಗಂಟೆಗೆ ಆರ್.ಸಿ.ಬಿ ತಂಡದ ಎಲ್ಲಾ ಆಟಗಾರರಿಗೆ ವಿಶೇಷ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿರುತ್ತದೆ. ಈ ಸಮಾರಂಭಕ್ಕೆ ಅಧಿಕೃತ ಟಿಕೇಟ್ ಮತ್ತು ಪಾಸ್ ಹೊಂದಿದವರಿಗೆ ಮಾತ್ರ ಪ್ರವೇಶವನ್ನು ಕಲ್ಪಿಸಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಿಯಮಿತ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಇರುವುದರಿಂದ ಸಮಾರಂಭಕ್ಕೆ ಆಗಮಿಸುವವರು ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತು ಮೆಟ್ರೋವನ್ನು ಬಳಸಬಹುದಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.