ADVERTISEMENT

ಕೊಲೆ ಪ್ರಕರಣ: ಸುಶೀಲ್‌ಕುಮಾರ್‌ಗೆ ಜಾಮೀನುರಹಿತ ವಾರಂಟ್

​ಪ್ರಜಾವಾಣಿ ವಾರ್ತೆ
Published 15 ಮೇ 2021, 19:31 IST
Last Updated 15 ಮೇ 2021, 19:31 IST
ಸುಶೀಲ್ ಕುಮಾರ್
ಸುಶೀಲ್ ಕುಮಾರ್   

ನವದೆಹಲಿ (ಪಿಟಿಐ): ಛತ್ರಸಾಲ ಕ್ರೀಡಾಂಗಣದಲ್ಲಿ ನಡೆದಿದ್ದ ಗಲಾಟೆ ಪ್ರಕರಣದಲ್ಲಿ ಭಾಗಿಯಾಗಿದ್ದರೆನ್ನಲಾದ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಮತ್ತು ಆರು ಜನರಿಗೆ ದೆಹಲಿ ನ್ಯಾಯಾಲಯವು ಶನಿವಾರ ಜಾಮೀನುರಹಿತ ವಾರಂಟ್‌ ಜಾರಿ ಮಾಡಿದೆ.

‘ಸುಶೀಲ್ ಮತ್ತು ಆರು ಜನರ ವಿರುದ್ಧ ಜಾಮೀನುರಹಿತ ವಾರಂಟ್ ಹೊರಡಿಸುವಂತೆ ನಾವು ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯವು ಪುರಸ್ಕರಿಸಿದೆ. ನಿಯಮದ ಪ್ರಕಾರ ಕ್ರಮ ಜರುಗಿಸಲಾಗುವುದು‘ ಎಂದು ಹಿರಿಯ ಪೊಲೀಸ್ ಆಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈಚೆಗೆ ಛತ್ರಸಾಲ ಕ್ರೀಡಾಂಗಣದಲ್ಲಿ ನಡೆದ ಗಲಾಟೆಯಲ್ಲಿ 23 ವರ್ಷದ ಕುಸ್ತಿಪಟು ಸಾಗರ್ ರಾಣಾ ಸಾವಿಗೀಡಾಗಿದ್ದರು. ಇದರಲ್ಲಿ ಸುಶೀಲ್ ಕುಮಾರ್ ಭಾಗಿಯಾಗಿದ್ದಾರೆ ಎಂಬ ಆರೋಪ ಬಂದ ಹಿನ್ನೆಲೆಯಲ್ಲಿ ಅವರು ನಾಪತ್ತೆಯಾಗಿದ್ದಾರೆ. ಪೊಲೀಸರು ಹೋದ ಸೋಮವಾರ ‘ಲುಕ್ ಔಟ್‌’ ನೋಟಿಸ್ ಹೊರಡಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.