ನವದೆಹಲಿ: ಗಾಯಾಳಾಗಿರುವ ನ್ಯೂಜಿಲೆಂಡ್‌ನ ಹಿರಿಯ ಬ್ಯಾಟರ್ ಕೇನ್ ವಿಲಿಯಮ್ಸನ್ ಅವರು, ನವೆಂಬರ್ 1ರಿಂದ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ವಿರುದ್ಧ ನಡೆಯಲಿರುವ ಮೂರನೇ ಹಾಗೂ ಅಂತಿಮ ಕ್ರಿಕೆಟ್ ಟೆಸ್ಟ್ ಪಂದ್ಯವನ್ನೂ ಕಳೆದುಕೊಳ್ಳಲಿದ್ದಾರೆ.
ತೊಡೆಯ ನೋವಿನಿಂದ ಬಳಲುತ್ತಿರುವ ಅವರು ಮೊದಲ ಎರಡು ಟೆಸ್ಟ್‌ಗಳಲ್ಲಿ ಆಡಿರಲಿಲ್ಲ. ಇಂಗ್ಲೆಂಡ್ ವಿರುದ್ಧ ನವೆಂಬರ್ 28 ರಂದು ತವರಿನಲ್ಲಿ ನಡೆಯುವ ಟೆಸ್ಟ್ ಸರಣಿಗೆ ಸಜ್ಜಾಗುವ ಉದ್ದೇಶದಿಂದ ಇಲ್ಲಿ ವಿಶ್ರಾಂತಿ ಪಡೆಯಲು ನಿರ್ಧರಿಸಿದ್ದಾರೆ. ನ್ಯೂಜಿಲೆಂಡ್ ಸರಣಿಯನ್ನು ಈಗಾಗಲೇ 2–0 ಯಿಂದ ಗೆದ್ದಾಗಿದೆ.
ತವರಿನಲ್ಲಿ ಭಾರತದ ಸತತ 18 ಸರಣಿ ಗೆಲುವುಗಳ ಸರಪಣಿಯೂ ಮುರಿದಿದೆ.
‘ಕೇನ್ ಚೇತರಿಸಿಕೊಳ್ಳುತ್ತಿರುವುದು ಶುಭ ಸಂಕೇತ. ಆದರೆ ಪೂರ್ಣಪ್ರಮಾಣದಲ್ಲಿ ಆಡಲು ಇನ್ನೂ ಕೆಲದಿನಗಳು ಹಿಡಿಯಬಹುದು. ಇಂಗ್ಲೆಂಡ್ ವಿರುದ್ಧ ಸರಣಿಗೆ ಅವರು ಪೂರ್ಣ ಪ್ರಮಾಣದಲ್ಲಿ ಸಜ್ಜಾಗಬೇಕು ಎಂಬುದು ನಮ್ಮ ನಿರೀಕ್ಷೆ’ ಎಂದು ನ್ಯೂಜಿಲೆಂಡ್ ಹೆಡ್ ಕೋಚ್ ಗ್ಯಾರಿ ಸ್ಟೀಡ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಜಿಲೆಂಡ್– ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯ ಮೊದಲ ಪಂದ್ಯ ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್‌ನಲ್ಲಿ ನವೆಂಬರ್ 28ರಂದು ಆರಂಭವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.