ADVERTISEMENT

ODI ನಾಯಕತ್ವದಿಂದ ರೋಹಿತ್ ಶರ್ಮಾಗೆ ಕೊಕ್: ಆಸಿಸ್ ಸರಣಿಗೆ ಹೊಸ ಕ್ಯಾಪ್ಟನ್

ಪಿಟಿಐ
Published 4 ಅಕ್ಟೋಬರ್ 2025, 9:47 IST
Last Updated 4 ಅಕ್ಟೋಬರ್ 2025, 9:47 IST
ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್
ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್   

ಅಹಮದಾಬಾದ್: ಪರ್ತ್‌ನಲ್ಲಿ‌ ಅಕ್ಟೋಬರ್ 19ರಿಂದ ಪ್ರಾರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಹಾಗೂ 5 ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ. ಏಕದಿನ ತಂಡದ ನಾಯಕರಾಗಿದ್ದ ರೋಹಿತ್ ಶರ್ಮಾ ಅವರ ಬದಲಿಗೆ ಶುಭಮನ್ ಗಿಲ್ ಅವರಿಗೆ ನಾಯಕತ್ವದ ಜವಾಬ್ದಾರಿ ವಹಿಸಲಾಗಿದೆ. ಮಾತ್ರವಲ್ಲ, ಶ್ರೇಯಸ್ ಅಯ್ಯರ್ ಅವರಿಗೆ ಉಪನಾಯಕನ ಪಟ್ಟ ಕಟ್ಟಲಾಗಿದೆ.

ಬಿಸಿಸಿಐ ಘೋಷಿಸಿರುವ 15 ಸದಸ್ಯರ ತಂಡದಲ್ಲಿ ವಿರಾಟ್ ಕೊಹ್ಲಿ ಜೊತೆಗೆ ರೋಹಿತ್ ಸ್ಥಾನ ಪಡೆದಿದ್ದು, ಶ್ರೇಯಸ್ ಅಯ್ಯರ್ ಅವರಿಗೆ ಉಪನಾಯಕನನ್ನಾಗಿ ನೇಮಿಸಲಾಗಿದೆ. ಮಾತ್ರವಲ್ಲ, ಜಸ್ಪ್ರೀತ್ ಬುಮ್ರಾ ಅವರು ಈ ಸರಣಿಯಿಂದ ವಿಶ್ರಾಂತಿ ತೆಗೆದುಕೊಂಡಿದ್ದಾರೆ.

ತಂಡದ ಆಯ್ಕೆ ಕುರಿತು ಪ್ರತಿಕ್ರಿಯೆ ನೀಡಿದ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್, ನಾಯಕತ್ವ ಬದಲಾವಣೆಯ ಕುರಿತು ರೋಹಿತ್ ಶರ್ಮಾ ಅವರಿಗೆ ಈಗಾಗಲೆ ತಿಳಿಸಲಾಗಿದೆ. ಈ ನಿರ್ಧಾರವನ್ನು ಅವರು ಹೇಗೆ ತೆಗೆದುಕೊಳ್ಳುತ್ತಾರೆ ಎಂಬುದು ಆಯ್ಕೆ ಸಮಿತಿ ಹಾಗೂ ರೋಹಿತ್ ಶರ್ಮಾಗೆ ಬಿಟ್ಟ ವಿಷಯ ಎಂದರು.

ADVERTISEMENT

ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತ ಏಕದಿನ ತಂಡ

ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೀ), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್‌ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಶದೀಪ್ ಸಿಂಗ್ , ಪ್ರಸಿದ್ಧ್ ಕೃಷ್ಣ, ಧ್ರುವ್ ಜುರೆಲ್, ಯಶಸ್ವಿ ಜೈಸ್ವಾಲ್ ಇದ್ದಾರೆ

ಭಾರತದ T20I ತಂಡ:

ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೀ), ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಆರ್ಷದೀಪ್ ಸಿಂಗ್, ಸಂಜು ಸ್ಯಾಮ್ಸನ್, ರಿಂಕು ಸಿಂಗ್, ವಾಷಿಂಗ್‌ಟನ್ ಸುಂದರ್ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.