ADVERTISEMENT

ಏಕದಿನ ರ‍್ಯಾಂಕಿಂಗ್‌: ರೋಹಿತ್‌, ಹಾರ್ದಿಕ್‌ಗೆ ಬಡ್ತಿ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2023, 18:34 IST
Last Updated 29 ಮಾರ್ಚ್ 2023, 18:34 IST
ರೋಹಿತ್
ರೋಹಿತ್   

ದುಬೈ (ಪಿಟಿಐ): ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಹಾರ್ದಿಕ್ ಪಾಂಡ್ಯ ಅವರು ಐಸಿಸಿ ಏಕದಿನ ಕ್ರಿಕೆಟ್‌ ರ‍್ಯಾಂಕಿಂಗ್‌ನಲ್ಲಿ ಬಡ್ತಿ ಪಡೆದಿದ್ದಾರೆ.

ಬುಧವಾರ ಪ್ರಕಟವಾದ ರ‍್ಯಾಂಕಿಂಗ್‌ನ ಬ್ಯಾಟರ್‌ಗಳ ವಿಭಾಗದಲ್ಲಿ ರೋಹಿತ್‌ ಒಂದು ಸ್ಥಾನ ಏರಿಕೆ ದಾಖಲಿಸಿ ಎಂಟನೇ ಸ್ಥಾನದಲ್ಲಿದ್ದಾರೆ. ಹಾರ್ದಿಕ್ ಪಾಂಡ್ಯ ಅವರು ಬೌಲರ್‌ಗಳ ವಿಭಾಗದಲ್ಲಿ 10 ಸ್ಥಾನ ಜಿಗಿತ ಕಂಡು 76ನೇ ಸ್ಥಾನ ತಲುಪಿದ್ದಾರೆ.

ಬ್ಯಾಟರ್‌ಗಳ ಪಟ್ಟಿಯಲ್ಲಿ ಶುಭಮನ್ ಗಿಲ್‌ ಐದನೇ ಸ್ಥಾನದಲ್ಲಿದ್ದರೆ, ವಿರಾಟ್‌ ಕೊಹ್ಲಿ ಏಳನೇ ಸ್ಥಾನದಲ್ಲಿದ್ದಾರೆ. ಅಗ್ರಸ್ಥಾನದಲ್ಲಿ ಪಾಕಿಸ್ತಾನ ಬಾಬರ್ ಆಜಂ ಇದ್ದಾರೆ.

ADVERTISEMENT

ಅಗ್ರ 10ರೊಳಗಿನ ಬೌಲರ್‌ಗಳ ಪಟ್ಟಿಯಲ್ಲಿ ಭಾರತದ ಆಟಗಾರನಾಗಿ ಮೊಹಮ್ಮದ್‌ ಸಿರಾಜ್ (3ನೇ ಸ್ಥಾನ) ಒಬ್ಬರೇ ಸ್ಥಾನ ಗಳಿಸಿದ್ದಾರೆ.

ಟಿ20 ಬೌಲರ್‌ಗಳ ರ‍್ಯಾಂಕಿಂಗ್‌ನಲ್ಲಿ ಅಫ್ಗಾನಿಸ್ತಾನದ ಲೆಗ್‌ಸ್ಪಿನ್ನರ್ ರಶೀದ್‌ ಖಾನ್‌ ಅಗ್ರಸ್ಥಾನಕ್ಕೆ ಮರಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.