
ಪ್ರಜಾವಾಣಿ ವಾರ್ತೆ
ಹುಬ್ಬಳ್ಳಿ: ಇಲ್ಲಿನ ರಾಜನಗರ ಕೆ.ಎಸ್.ಸಿ.ಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ಮತ್ತು ಜಮ್ಮು- ಕಾಶ್ಮೀರ ನಡುವಿನ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯ ವೀಕ್ಷಣೆಗೆ ಜಮ್ಮು -ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಆಗಮಿಸಲಿದ್ದಾರೆ.
ಶುಕ್ರವಾರ ಸಂಜೆ 7.20ಕ್ಕೆ ಹುಬ್ಬಳ್ಳಿಗೆ ಬರುವ ಅವರು ಶನಿವಾರ ಬೆಳಿಗ್ಗೆ 10 ಗಂಟೆಗೆ ಕ್ರೀಡಾಂಗಣಕ್ಕೆ ಭೇಟಿ ನೀಡಿ ಐದನೇ ದಿನದ ಆಟ ವೀಕ್ಷಿಸಲಿದ್ದಾರೆ. ಮೈದಾನದಲ್ಲಿ ಈಗಲೇ ಭದ್ರತಾ ವ್ಯವಸ್ಥೆ ಹೆಚ್ಚಿಸಲಾಗಿದೆ.
ಜಮ್ಮು ಕಾಶ್ಮೀರ ತಂಡ ಪ್ರಥಮ ಇನ್ನಿಂಗ್ಸ್ ನಲ್ಲಿ 584 ರನ್ ಗಳಿಸಿದೆ. ಕರ್ನಾಟಕ ಗುರುವಾರ 3 ನೇ ದಿನದಾಟದ ಅಂತ್ಯಕ್ಕೆ 5 ವಿಕೆಟ್ ನಷ್ಟಕ್ಕೆ 220 ರನ್ ಗಳಿಸಿತ್ತು. ಶುಕ್ರವಾರ ನಾಲ್ಕನೇ ದಿನದಾಟ ಆರಂಭಿಸಿದ್ದು, 6 ವಿಕೆಟ್ ಗೆ 241 ರನ್ ಗಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.