
ಕ್ರಿಕೆಟ್
ಕರಾಚಿ: ಅಬುಧಾಬಿಯಲ್ಲಿ ಶನಿವಾರ ನಡೆಯಬೇಕಿದ್ದ ಪಾಕಿಸ್ತಾನ ಶಾಹೀನ್ಸ್ ಹಾಗೂ ಇಂಗ್ಲೆಂಡ್ ಲಯನ್ಸ್ ನಡುವಣ ಮೂರನೇ ‘ಏಕದಿನ’ ಪಂದ್ಯವನ್ನು ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನ ಪರಿಸ್ಥಿತಿಯ ಕಾರಣಕ್ಕೆ ರದ್ದುಗೊಳಿಸಲಾಗಿದೆ.
ಭದ್ರತಾ ಕಾರಣಗಳಿಂದಾಗಿ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಆಟಗಾರರು ಹಾಗೂ ಕೋಚ್ ಸಿಬ್ಬಂದಿಗೆ ಹೋಟೆಲ್‌ನಿಂದ ಹೊರಬರದಂತೆ ಸೂಚಿಸಲಾಗಿದೆ. ಅಭ್ಯಾಸದ ಅವಧಿಯನ್ನೂ ಮೊಟಕುಗೊಳಿಸಲಾಗಿದೆ ಎಂದು ಪಾಕ್ ಕ್ರಿಕೆಟ್ ಮಂಡಳಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಇಂಗ್ಲೆಂಡ್‌ಗೆ ಕರೆಸಿಕೊಳ್ಳಿ’: ಇಂಗ್ಲೆಂಡ್ ಲಯನ್ಸ್ ತಂಡದ ಕೋಚ್ ಜಾನಿ ಬೇಸ್ಟೊ ತಮ್ಮನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆಸಿಕೊಳ್ಳುವಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರಿಗೆ ಮನವಿ ಮಾಡಿದ್ದಾರೆ. ಕೊಲ್ಲಿ ಯುದ್ಧದ ಬಗ್ಗೆ ಸ್ಟಾರ್ಮರ್ ಅವರು ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದ ವಿಡಿಯೊಗೆ ಪ್ರತಿಕ್ರಿಯಿಸಿ ಬೇಸ್ಟೊ ಮನವಿ ಮಾಡಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.