
ಬಾಂಗ್ಲಾದೇಶ ಕ್ರಿಕೆಟ್ ತಂಡದ ಆಟಗಾರರು
ಕರಾಚಿ: ಭಾರತದಲ್ಲಿ ನಡೆಯಲಿರುವ ಮುಂಬರುವ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಆಡಲು ಬಾಂಗ್ಲಾದೇಶ ನಿರಾಕರಿಸಿದೆ. ಬಾಂಗ್ಲಾದ ಈ ನಿರ್ಧಾರವನ್ನು ಪಾಕಿಸ್ತಾನ ಬೆಂಬಲಿಸಿದೆ ಎಂದು ವರದಿಯಾಗಿದೆ.
ಭದ್ರತಾ ಕಾರಣಗಳನ್ನು ನೀಡಿ ಭಾರತದಲ್ಲಿ ಆಡಲು ಬಾಂಗ್ಲಾದೇಶ ನಿರಾಕರಿಸಿತ್ತು. ಈ ಕುರಿತು ಐಸಿಸಿಗೆ ಬರೆದ ಪತ್ರದಲ್ಲಿ ಪಾಕಿಸ್ತಾನ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ ಎಂದು ತಿಳಿದು ಬಂದಿದೆ.
ಬಾಂಗ್ಲಾದೇಶ ಸರ್ಕಾರವನ್ನು ಪಾಕಿಸ್ತಾನ ಸಂಪರ್ಕಿಸಿದೆ ಎಂದು ಮಂಡಳಿಯ ಮೂಲಗಳು ಹೇಳಿವೆ. ಆದರೆ ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ.
ಬುಧವಾರ (ಇಂದು) ಸಭೆ ಸೇರಲಿರುವ ಐಸಿಸಿ ಈ ಕುರಿತು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಿದೆ.
ಫೆಬ್ರುವರಿ 7ರಂದು ಟಿ20 ವಿಶ್ವಕಪ್ ಆರಂಭವಾಗಲಿದೆ. ಈಗಿನ ವೇಳಾಪಟ್ಟಿಯಂತೆ ಬಾಂಗ್ಲಾದೇಶವು ಮೂರು ಲೀಗ್ ಪಂದ್ಯಗಳನ್ನು ಕೋಲ್ಕತ್ತದಲ್ಲಿ ಮತ್ತು ಒಂದು ಪಂದ್ಯವನ್ನು ಮುಂಬೈನಲ್ಲಿ ಆಡಬೇಕಾಗಿದೆ. ತನ್ನ ಪಂದ್ಯಗಳನ್ನು ವಿಶ್ವಕಪ್ ಟೂರ್ನಿಗೆ ಜಂಟಿ ಆತಿಥ್ಯ ವಹಿಸಿರುವ ಶ್ರೀಲಂಕಾಕ್ಕೆ ಸ್ಥಳಾಂತರಿಸಬೇಕು ಎಂದು ಬಾಂಗ್ಲಾದೇಶ ಪಟ್ಟು ಹಿಡಿದಿದೆ.
ಐಸಿಸಿ ಮತ್ತು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ನಡುವೆ ಕಳೆದ ಶನಿವಾರ ಮಾತುಕತೆ ನಡೆದರೂ, ಕಗ್ಗಂಟಿಗೆ ಪರಿಹಾರ ದೊರಕಿರಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.