ADVERTISEMENT

ಸ್ಮೃತಿ ಜೊತೆ ಮದುವೆ ಮುಂದೂಡಿಕೆ: ಮೊದಲ ಬಾರಿ ಸಾರ್ವಜನಿಕವಾಗಿ ಕಾಣಿಸಿಕೊಂಡ ಪಲಾಶ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಡಿಸೆಂಬರ್ 2025, 10:50 IST
Last Updated 1 ಡಿಸೆಂಬರ್ 2025, 10:50 IST
   

ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ತಾರಾ ಆಟಗಾರ್ತಿ ಸ್ಮೃತಿ ಮಂದಾನ ಜೊತೆ ಮದುವೆ ಮುಂದೂಡಲ್ಪಟ್ಟ ನಂತರ ಗಾಯಕ–ಸಂಗೀತ ನಿರ್ದೇಶಕ ಪಲಾಶ್‌ ಮುಚ್ಚಲ್‌ ಅವರು ಸೋಮವಾರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.

ಕಪ್ಪು ಬಣ್ಣದ ಶರ್ಟ್‌ ಮತ್ತು ಪ್ಯಾಂಟ್‌ ಧರಿಸಿರುವ ಪಲಾಶ್ ಅವರು ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ವಿಮಾನ ನಿಲ್ದಾಣದ ಆವರಣದಲ್ಲಿ ಪಲಾಶ್ ಅವರು ನಡೆದುಕೊಂಡು ಬರುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

ನವೆಂಬರ್ 23ರಂದು ಸ್ಮೃತಿ ಮಂದಾನ ಮತ್ತು ಪಲಾಶ್ ಅವರ ವಿವಾಹ ನಿಗದಿಯಾಗಿತ್ತು. ಮದುವೆ ದಿನವೇ ಸ್ಮೃತಿ ತಂದೆಗೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಮದುವೆ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು ಎಂದು ವರದಿಯಾಗಿತ್ತು. ಮರುದಿನ ಪಲಾಶ್ ಅವರೂ ಆಸ್ಪತ್ರೆಗೆ ದಾಖಲಾಗಿದ್ದು, ನಂತರ ಸಾಂಗ್ಲಿಯಿಂದ ಮುಂಬೈ ಆಸ್ಪತ್ರೆಗೆ ಅವರನ್ನು ಸ್ಥಳಾಂತರಿಸಲಾಗಿತ್ತು.

ADVERTISEMENT

ಇದಾದ ಬೆನ್ನಲ್ಲೇ ಸ್ಮೃತಿ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಿಂದ ಮದುವೆ ಸಮಾರಂಭದ ಫೋಟೊಗಳನ್ನು ಅಳಿಸಿ ಹಾಕಿದ್ದು, ಹಲವು ಅನುಮಾನಗಳನ್ನು ಹುಟ್ಟುಹಾಕಿತ್ತು. ಪಲಾಶ್ ಅವರು ಮೋಸ ಮಾಡಿದ್ದರಿಂದಲೇ ಮದುವೆ ನಿಂತಿದೆ ಎಂಬ ವದಂತಿಗಳು ಹರಡಿದ್ದವು.

ಮದುವೆ ಮುಂದೂಡಲು ನಿಖರ ಕಾರಣವೇನು ಎಂಬುದು ಈವರೆಗೆ ತಿಳಿದು ಬಂದಿಲ್ಲ. ಈ ಬಗ್ಗೆ ಎರಡು ಕುಟುಂಬಗಳು ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.