ಬೆಂಗಳೂರು: ನಾಯಕ ರವೀಂದ್ರ ಸಾಂಟೆ (16ಕ್ಕೆ 5) ಅವರ ಪರಿಣಾಮಕಾರಿ ಬೌಲಿಂಗ್ ನೆರವಿನಿಂದ ಭಾರತ ಅಂಗವಿಕಲರ (ಕಾಲಿನ ನ್ಯೂನತೆಯುಳ್ಳ) ತಂಡವು ಶನಿವಾರ ಆರು ವಿಕೆಟ್‌ಗಳಿಂದ ಶ್ರೀಲಂಕಾ ತಂಡವನ್ನು ಮಣಿಸಿತು.
ಪಿ.ಡಿ. ದೀಪಕ್ ಲೋಹಿಯಾ ಸ್ಮರಣಾರ್ಥ ಟ್ರೋಫಿಗಾಗಿ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಕ್ರಿಕೆಟ್ ಸರಣಿಯಲ್ಲಿ ಭಾರತ 4–0 ಮುನ್ನಡೆ ಸಾಧಿಸಿದೆ. ಮೊದಲ ಮೂರು ಪಂದ್ಯಗಳಲ್ಲೂ ಭಾರತ ತಂಡ ಜಯ ಸಾಧಿಸಿತು. ಕೊನೆಯ ಪಂದ್ಯವು ಸೋಮವಾರ ನಡೆಯಲಿದೆ.
ಕುಂಬಳಗೋಡಿನ ಕಿಣಿ ಸ್ಪೋರ್ಟ್ಸ್ ಅರೇನಾದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಂಕಾ 18.4 ಓವರ್‌ಗಳಲ್ಲಿ 104 ರನ್ ಗಳಿಸಿತು. ಗುರಿಯನ್ನು ಬೆನ್ನಟ್ಟಿದ ಭಾರತ 18.1 ಓವರ್‌ಗಳಲ್ಲಿ 4 ವಿಕೆಟ್‌ಗೆ 105 ರನ್ ಹೊಡೆದು ಸಂಭ್ರಮಿಸಿತು. ರವೀಂದ್ರ ಸಾಂಟೆ ಪಂದ್ಯದ ಆಟಗಾರ ಗೌರವಕ್ಕೆ ಪಾತ್ರವಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.